ಶೈಕ್ಷಣಿಕ ಸುದ್ದಿಗಳು

ರದ್ದಾಗಿದ್ದ ಬೋರ್ಡ್ ಎಕ್ಸಾಂ ನಡೆಸಲು ವಿಭಾಗೀಯ ಪೀಠ ಗ್ರೀನ್ ಸಿಗ್ನಲ್

ಸುದ್ದಿಲೈವ್/ಶಿವಮೊಗ್ಗ

5,8,9,11 ನೇ ತರಗತಿಗಳಿಗೆ ಬೋರ್ಡ್ ಎಕ್ಸಾಂ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದ ಪರಿಣಾಮ ಈಗಾಗಲೇ ರಾಜ್ಯದಲ್ಲಿ ನಿಗದಿಯಾದ ಬೋರ್ಡ್ ಎಕ್ಸಾಂಗಳು ಈ ನಾಲ್ಕು ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ಎಂದಿನಂತೆ ನಡೆಯಲಿದೆ.

2023–24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಸರ್ಕಾರ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.

ಇದೀಗ ಹೈಕೋರ್ಟ್ ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್​ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

ಇದರಿಂದ ಈ ಹಿಂದೆ ನಿಗದಿಯಾಗಿದ್ದ ಈ ನಾಲ್ಕು ತರಗತಿಗಳ ಬೋರ್ಡ್ ಎಕ್ಸಾಂ ಸೋಮವಾರದಿಂದ ನಡೆಯಲಿದೆ.

ಇದನ್ನೂ ಓದಿ-https://suddilive.in/archives/10264

Related Articles

Leave a Reply

Your email address will not be published. Required fields are marked *

Back to top button