ಸ್ಥಳೀಯ ಸುದ್ದಿಗಳು
ಬೊಮ್ಮನ್ ಕಟ್ಟೆಯ ನಿವಾಸಿಗಳ ಆಗ್ರಹವೇನು ಗೊತ್ತಾ?

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಬೊಮ್ಮನ್ ಕಟ್ಟೆಯ ಮನೆಗಳಿಗೆ ಮಹಾನಗರ ಪಾಲಿಕೆಯ ವತಿಯಿಂದ ಸರಬರಾಜುವಾಗುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದೆ ಎಂದು ಆರೋಪಿಸಿ ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೊಮ್ಮನ್ ಕಟ್ಟೆಯಲ್ಲಿ ಕಲುಷಿತ ನೀರು ಸರಬರಾಜುವಾಗುತ್ತಿರುವುದರಿಂದ ಇಲ್ಲಿ ಮಕ್ಕಳಿಗೆ ಡೆಂಗ್ಯೂ, ಮತ್ತು ವೈರಲ್ ಕಾಯಿಲೆಗಳು ಹೆಚ್ಚಾಗಿ ಕಾಣಿಸುತ್ತಿದೆ ಎಂದು ಸ್ಥಳೀಯ ರಘುನಾಥ್ ಆರೋಪಿಸಿದ್ದಾರೆ.
ಮುಖ್ಯ ರಸ್ತೆಯಲ್ಲಿರುವ ಚರಂಡಿ ವ್ಯವಸ್ಥಿತವಾಗಿಲ್ಲದ ಕಾರಣ ಇದು ಕುಡಿಯುವ ನೀರೊಂದಿಗೆ ಬೆರೆತು ಸರಬರಾಜಾಗುತ್ತಿದೆ ಎಂದು ಶಂಕಿಸಲಾಗಿದೆ. ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ ಸೂಕ್ತ ಚರಂಡಿ ಮತ್ತು ಯುಜಿಡಿ ಕಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ-https://suddilive.in/archives/1018
