63 ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ ನಾಲ್ಕು ಮಳಿಗೆಗಳ ವಿರುದ್ಧ ದೂರು ದಾಖಲು ಕೆಜಿಗಟ್ಟಲೆ ಪಟಾಕಿ ವಶ

ಸುದ್ದಿಲೈವ್/ಶಿವಮೊಗ್ಗ

ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡ ರಾಜ್ಯಾದ್ಯಂತ ಎಚ್ಚರಿಕೆ ವಹಿಸಲಾಗಿದೆ. ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಮತ್ತು ಗೋದಾಮುಗಳಲ್ಲಿ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ ವಾಸಕ್ಕೆ ಪಡೆಯಲಾಗಿದೆ. ಅಲ್ಲದೆ ಉಳಿದ ಅಂಗಡಿಗಳಲ್ಲಿ ಪರವಾನಗಿ ಮತ್ತು ಸುರಕ್ಷತೆಯ ಕ್ರಮದ ಬಗ್ಗೆ ಪರಿಶೀಲನೆ ನಡೆಸಲಾಗಿದೆ.
ಜಿಲ್ಲೆಯ 63 ಪಟಾಕಿಗಳ ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಎಸ್ಪಿ ಮಿಥುನ್ ಕುಮಾರ್ ಅವರ ಸೂಚನೆಯ ಮೇರೆಗೆ, ಶಿವಮೊಗ್ಗ-ಎ ಉಪ ವಿಭಾಗದಲ್ಲಿ ಡಿವೈಎಸ್ಪಿ ಬಾಲರಾಜ್ ಮತ್ತು ಸುರೇಶ್ ಎಂ, ಭದ್ರಾವತಿ ಉಪ ವಿಭಾಗದಲ್ಲಿ ಡಿವೈಎಸ್ಪಿ ನಾಗರಾಜ್, ಸಾಗರ ಉಪ ವಿಭಾಗದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್,
ಶಿಕಾರಿಪುರ ಉಪ ವಿಭಾಗದಲ್ಲಿ ಡಿವೈಎಸ್ಪಿ ಶಿವಾನಂದ್ ಮದರಖಂಡಿ ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ, ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ, ಮೆಸ್ಕಾಂ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿದೆ.
ಶಿವಮೊಗ್ಗ-ಎ ಉಪ ವಿಭಾಗದಲ್ಲಿ 03, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ 03, ಭದ್ರಾವತಿ ಉಪ ವಿಭಾಗದಲ್ಲಿ 21, ಸಾಗರ ಉಪ ವಿಭಾಗದಲ್ಲಿ 09, ಶಿಕಾರಿಪುರ ಉಪ ವಿಭಾಗದಲ್ಲಿ 20, ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ 07 ಸೇರಿ ಜಿಲ್ಲೆಯಾದ್ಯಂತ ಒಟ್ಟು 63 ಮಳಿಗೆ ಮತ್ತು ಗೋದಾಮುಗಳಲ್ಲಿ ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಮತ್ತು ಪರವಾನಿಗೆ ಪಡೆದಿರುವ ಬಗ್ಗೆ, ಮಳಿಗೆ ಹಾಗೂ ಗೋದಾಮುಗಳಲ್ಲಿ ಎಲ್ಲಾ ಅವಶ್ಯಕ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿರುವ ಬಗ್ಗೆ ಮತ್ತು ಪಟಾಕಿ ಮಾರಾಟ ಮಾಡಲು ನಿರ್ಮಿಸಿರುವ ಮಳಿಗೆಗಳು ಸುರಕ್ಷತಾ ದೃಷ್ಠಿಯಿಂದ ಸೂಕ್ತವಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು.
ನಿಯಮ ಉಲ್ಲಂಘನೆ ಮಾಡಿ,ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದ ಮತ್ತು ಮಾರಾಟ ಮಾಡುತ್ತಿದ್ದ ಮಳಿಗೆ / ಗೋದಾಮಿನ ಮಾಲೀಕರ ವಿರುದ್ಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ 01, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 01 , ವಿನೋಬನಗರ ಪೊಲೀಸ್ ಠಾಣೆಯಲ್ಲಿ 01 ಮತ್ತು ಕೋಟೆ ಪೊಲೀಸ್ ಠಾಣೆಯಲ್ಲಿ 01 ಪ್ರರಕಣ ಸೇರಿದಂತೆ ಒಟ್ಟು 04 ಪ್ರಕರಣಗಳನ್ನು ದಾಖಲಿಸಿ, ಅಂದಾಜು 2,000 ಕೆ.ಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಇದನ್ನೂ ಓದಿ-https://suddilive.in/archives/1046
