ಕ್ರೈಂ ನ್ಯೂಸ್

ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು

ಸುದ್ದಿಲೈವ್/ಭದ್ರಾವತಿ

ಇಂದು ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.

ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಸುಂ(14) ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಲೆಂದು ಗ್ರಾಮದಿಂದ ಶಿವಮೊಗ್ಗಕ್ಕೆ ತೆರಳಲು ಬಸ್ ಹತ್ತಲೆಂದು ರಸ್ತೆ ದಾಟುವಾಗ ಚನ್ನಗಿರಿ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಡಿಕ್ಕಿ ಹೊಡೆದು ಬಾಲಕಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ. ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SSLC ಪರೀಕ್ಷೆ

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಆರಂಭಕ್ಕೂ ಮುನ್ನವೇ ಇಬ್ವರು  ವಿದ್ಯಾರ್ಥಿ/ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಆನಂದ‌ಪುರಂ ಪೊಲೀಸ್ ಠಾಣೆಯಲ್ಲಿ ಬಾಲಕ ನೇಣಿಗೆ ಶರಣಾಗಿದ್ದರೆ.

ಹೊಳೆಹೊನ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ ಹತ್ತಲು ರಸ್ತೆ ದಾಟುವಾಗ ಬಾಲಕಿ ಸಾವನ್ನಪ್ಪಿದ್ದಾಳೆ. ಇದರಿಂದ ಪರೀಕ್ಷೆಗೆ ಎರಡು ಜೀವ ಬಲಿಯಾಗಿದೆ. ಜಿಲ್ಲೆಯಲ್ಲಿ 78 ಪರೀಕ್ಷಾ ಕೇಂದ್ರಗಳಿದ್ದು 24002 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.

ಇದನ್ನೂ ಓದಿ-https://suddilive.in/archives/11445

Related Articles

Leave a Reply

Your email address will not be published. Required fields are marked *

Back to top button