ರಾಜ್ಯ ಸುದ್ದಿಗಳು

ಮಾ. 29 ರಿಂದ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಸುದ್ದಿಲೈವ್/ಶಿವಮೊಗ್ಗ

2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೃಹತ್/ಮಧ್ಯಮ ನೀರಾವರಿ ಜಲಾಶಯಗಳಲ್ಲಿರುವ ನೀರನ್ನು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ ವಿವಿಧ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ನದಿಯ ಮೂಲಕ ದಿನಾಂಕ: 29-03-2024 ರಿಂದ ದಿ:06-04-2024 ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್‍ನಂತೆ ಒಟ್ಟು 2.00 ಟಿ.ಎಂ.ಸಿ ನೀರನ್ನು ಹರಿಸಲಾಗುವುದು.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ನದಿಗೆ ಇಳಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/11533

Related Articles

Leave a Reply

Your email address will not be published. Required fields are marked *

Back to top button