ಕ್ರೈಂ ನ್ಯೂಸ್

ನೀತಿ ಸಂಹಿತೆ ಉಲ್ಲಂಘಿಸಿ ಮದ್ಯ ಸಂಗ್ರಹ-ಪ್ರಕರಣ ದಾಖಲು

ಸುದ್ದಿಲೈವ್/ಶಿವಮೊಗ್ಗ

ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಸಂಗ್ರಹವಿಟ್ಟುಕೊಂಡಿದ್ದ ಹಿನ್ನಲೆಯಲ್ಲಿ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಪರವಾನಗಿ ಇಲ್ಲದೆ ಮದ್ಯ ಸಂಗ್ರಹಿಸಿಕೊಂಡಿದ್ದರಿಂದ ದಾಳಿಯಲ್ಲಿ ಸಿಕ್ಕ ಮದ್ಯವನ್ನ ವಶಕ್ಕೆ ಪಡೆಯಲಾಗಿದೆ.

ನಿನ್ನೆ ಬೆಳಿಗ್ಗೆ ಶಿವಮೊಗ್ಗ ಟೌನ್ ಸೀಗೆಹಟ್ಟಿ, ಓಟಿ ರಸ್ತೆಯಲ್ಲಿರುವ ಪಾಳು ಬಿದ್ದಿರುವ ಮನೆಯ ಹಿಂಭಾಗದ ಓಣಿಯ ಸಾರ್ವಜನಿಕ ಸ್ಥಳದಲ್ಲಿ  ಪರವಾನಿಗೆ ಇಲ್ಲದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಿಟ್ಟುಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು,

ಎಸ್ಪಿ ಮಿಥುನ್ ಕುಮಾರ್ ಜಿ.ಕೆ.  ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್ ಭೂಮರೆಡ್ಡಿ,  ಮತ್ತು ಕಾರ್ಯಪ್ಪ,ರವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ, ಬಾಬು ಆಂಜನಪ್ಪನವರ ಮೇಲ್ವಿಚಾರಣೆಯಲ್ಲಿ, ದೊಡ್ಡಪೇಟೆ ಠಾಣೆಯ ಪಿಐ ರವಿ ಪಾಟೀಲ್  ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.

ಅಂದಾಜು ಮೌಲ್ಯ 10,079 /- ರೂಗಳ ಒಟ್ಟು 22.1 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ-https://suddilive.in/archives/11545

Related Articles

Leave a Reply

Your email address will not be published. Required fields are marked *

Back to top button