ಸ್ಥಳೀಯ ಸುದ್ದಿಗಳು

ಅ.27 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕಿನ ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಮಾರ್ಗದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಅ.27 ರಂದು ಮಧ್ಯಾಹ್ನ 12.30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ‌ ಓದಿ-https://suddilive.in/archives/1792

Related Articles

Leave a Reply

Your email address will not be published. Required fields are marked *

Back to top button