ನಗರ‌ ಸುದ್ದಿಗಳು

ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಮನವಿ

ಸುದ್ದಿಲೈವ್/ಶಿವಮೊಗ್ಗ

ವಿದ್ಯುತ್ ವ್ಯತ್ಯಯದ ಹಿನ್ನಲೆಯಲ್ಲಿ ಎರಡು ದಿನಗಳು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ-https://suddilive.in/archives/12946

Related Articles

Leave a Reply

Your email address will not be published. Required fields are marked *

Back to top button