ವಿಶ್ವ ಅರವಳಿಕೆ ದಿನಾಚರಣೆ ಹಿನ್ನಲೆಯಲ್ಲಿ ನಡೆದ ಜಾಗೃತಿ ಕಾರ್ಯಕ್ರಮ-ಎಸ್ಪಿ ಮಿಥುನ್ ಕುಮಾರ್, ಡಾ.ನಾಗೇಂದ್ರ ಭಾಗಿ

ಸುದ್ದಿಲೈವ್/ಶಿವಮೊಗ್ಗ

ನಗರದ ಗೋಪಿ ವೃತ್ತದಲ್ಲಿ ವಿಶ್ವ ಅರವಳಿಕೆ ದಿನಾಚರಣೆಯ ಅಂಗವಾಗಿ ಅರವಳಿಕೆ ತಜ್ಞರ ಸಂಘ ಶಿವಮೊಗ್ಗ ಮತ್ತು ಮ್ಯಾಕ್ಸ್ ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಹೃದಯಾಘಾತವಾದಾಗ ಸಾರ್ವಜನಿಕರು ಕೈಗೊಳ್ಳಬೇಕಾದ ತುರ್ತು ಮತ್ತು ಪ್ರಾಥಮಿಕ ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ವೈದ್ಯಾಧಿಕಾರಿಗಳು ಮತ್ತು ಅರವಳಿಕೆ ತಜ್ಞರು ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆಯ ಮೂಲಕ, ತುರ್ತು ಸಂದರ್ಭದಲ್ಲಿ ಕೈಗೊಳ್ಳುವ ಪ್ರಾಥಮಿಕ ಚಿಕಿತ್ಸೆಯಿಂದ ಹೇಗೆ ಜೀವ ರಕ್ಷಣೆ ಮಾಡಬಹುದೆಂದು ತಿಳಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಮಾತನಾಡಿ ಹೃದಯಾಘಾತದಂತಹ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ಭಯವಿಲ್ಲದೆ, ಸಾಮಾಜಿಕ ಕಳಕಳಿ ಮತ್ತು ಬದ್ಧತೆಯಿಂದ ಮುಂದೆ ಬಂದು, ಅಪಾಯದಲ್ಲಿರುವ ವ್ಯಕ್ತಿಗಳ ಪ್ರಾಣ ರಕ್ಷಿಸಬೇಕು ಹಾಗೂ ಎಲ್ಲಾ ಸಾರ್ವಜನಿಕರು ಇದನ್ನು ತಮ್ಮ ಜವಾಬ್ದಾರಿ ಎಂದು ಭಾವಿಸಿ ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಿಸುವ ಕಾರ್ಯದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.
ಸದರಿ ಕಾರ್ಯಕ್ರಮದಲ್ಲಿ ಮ್ಯಾಕ್ಸ್ ಆಸ್ಪತ್ರೆಯ ಅರವಳಿಕೆ ತಜ್ಞರಾದ ಡಾ|| ಶಿವಕುಮಾರ್, ಡಾ|| ಹರೀಶ್, ಸುಬ್ಬಯ್ಯ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ|| ನಾಗೇಂದ್ರ, ಡಾ|| ಲತಾ, ಮೆಗ್ಗಾನ್ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ|| ಗುರುಧತ್, ಡಾ|| ಸಂದ್ಯಾ, ಡಾ|| ಚಂದ್ರಶೇಖರ್, ಡಾ|| ವೀಣಾ, ಡಾ|| ಬಸವರಾಜ್ ಮತ್ತು ಡಾ|| ಶ್ವೇತಾ ರವರು ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/1329
