ನಗರ‌ ಸುದ್ದಿಗಳು

ಬಿಜೆಪಿ ಕೋರ್ ಕಮಿಟಿ ಸಭೆ-ಬಿ.ಎಲ್ ಸಂತೋಷ್ ರಾಜ್ಯಾಧ್ಯಕ್ಷ ಭಾಗಿ

ಸುದ್ದಿಲೈವ್/ಶಿವಮೊಗ್ಗ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆ ನಡೆದಿದೆ.

ಬಿಜೆಪಿಯ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ. ಎಲ್ ಸಂತೋಷ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದಿರುವ ಕೋರ್ ಕಮಿಟಿ ಸಭೆಯಲ್ಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಶಾಸಕರು ಸೇರಿದಂತೆ ಬಿಜೆಪಿಯ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇವರಿಗೆ ಪಕ್ಷ ನಡೆಸಿರುವ ಚಟುವಟಿಕೆಗಳ ಕುರಿತು ಸಂತೋಷ ಹಾಗೂ ವಿಜಯೇಂದ್ರ ಅವರಿಗೆ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸಿದೆ.

ಕ್ಷೇತ್ರದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಹಾಗೂ ಚುನಾವಣೆಗೆ ಉಳಿದಿರಿವ 13 ದಿನಗಳ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.

Related Articles

Leave a Reply

Your email address will not be published. Required fields are marked *

Back to top button