ಸ್ಥಳೀಯ ಸುದ್ದಿಗಳು

ಅ.19 ರಿಂದ 21ರ ವರೆಗೆ ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕ ಕುಂದು ಕೊರತೆ ಸಭೆ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕ ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸಲು ದಿನಾಂಕ ಫಿಕ್ಸ್ ಮಾಡಲಾಗಿದೆ. ಜಿಲ್ಲೆಯಲ್ಲಿ ಅ.19 ರಿಂದ 21 ರ ವರೆಗೆ ವಿವಿಧ ತಾಲೂಕಿನಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ.

ಅ. 19 ರಂದು ಬೆಳಿಗ್ಗ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಭದ್ರಾವತಿಯ ತಾಲೂಕು ಕಚೇರಿಯನಡೆದರೆ, ಇದೇ ಸಮಯದಲ್ಲಿ ತೀರ್ಥಹಳ್ಳಿಯ ತಾಲೂಕು ಕಚೇರಿಯ ಸಭಾಂಗಣದಲ್ಲಿ ಜರುಗಲಿದೆ.

ಅ.20 ರಂದು ಬೆಳಿಗ್ಗೆ 11 ರಿಂದ 1 ಗಂಟೆಯ ವರೆಗೆ  ಸೊರಬದಲ್ಲಿ ತಾಲೂಕು ಕಚೇರಿಯ ಸಭಾಂಗಣದಲ್ಲಿ, ಶಿಕಾರಿಪುರದಲ್ಲಿ ತಾಲೂಕೂ ಕಚೇರಿಯ ಸಭಾಂಗಣ, ಹಾಗೂ ಅ.21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಸಾಗರದ ತಾಲೂಕು ಕಚೇರಿಯಲ್ಲಿ ಕುಂದು ಕೊರತೆ ಸಭೆ ನಡೆಯಲಿದೆ ಎಂದು ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

ಇದನ್ನೂ ಓದಿ-https://suddilive.in/archives/1372

Related Articles

Leave a Reply

Your email address will not be published. Required fields are marked *

Back to top button