ಸ್ಥಳೀಯ ಸುದ್ದಿಗಳು
ಅಂಬ್ಯುಲೆನ್ಸ್ ಚಾಲಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸುದ್ದಿಲೈವ್/ತೀರ್ಥಹಳ್ಳಿ

ಅಂಬ್ಯುಲೆನ್ಸ್ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಮೇಶ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಯಲ್ಲಿ ಸುಮಾರು 10 ವರ್ಷದಿಂದ ಆಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರಮೇಶ್ ಹೊಸನಗರ ಪಟ್ಟಣದವರು. ಅಲ್ಲಿಯೇ ಅಂತ್ಯಕ್ರಿಯೆ ನಡೆಯಿತು. ಇವರಿಗೆ ಇಬ್ಬರು ಪುತ್ರರಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ಬೂ ಓದಿ-https://suddilive.in/archives/1487
