ರಾಜಕೀಯ ಸುದ್ದಿಗಳು

ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಹೊಣೆಗಾರಿಕೆ ಮಹತ್ವದ್ದು-ಕೆ.ಬಿ.ಅಶೋಕ್ ನಾಯ್ಕ್

ಸುದ್ದಿಲೈವ್/ಹೊಳೆಹೊನ್ನೂರು

ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಹೊಣೆಗಾರಿಕೆ ಅತ್ಯಂತ ಮಹತ್ವದ್ದು ಎಂದು ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು.

ಹೊಳೆಹೊನ್ನೂರು ಮಂಡಲದ ಅರಹತೊಳಲು- ಕೈಮರ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಗಟನಾಯಕರು ಮತದಾರರ ನೇರವಾಗಿ ತಲುಪಿ ಮತಯಾಚಿಸಿ, ಆನಂತರ ಮತದಾನದ ದಿನ ಅವರನ್ನು ಮತಗಟ್ಟೆಗೆ ವಾಹನದ ಮೂಲಕ ಕರೆ ತಂದು ಬಳಿಕ ಮನೆಗೆ ಬಿಡುವಂತಾಗಬೇಕು, ಈ ನಿಟ್ಟಿನಲ್ಲಿ ಗಟನಾಯಕರು ಶ್ರಮಿಸಬೇಕು ಎಂದರು.

ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ,ಬಿಜೆಪಿ ದೊಡ್ಡ ಕಾರ್ಯಕರ್ತರ ಪಡೆಯನ್ನು ಹೊಂದಿದೆ, ಈ ಚುನಾವಣೆಯಲ್ಲಿ ಮೈತ್ರಿ ಗೆಲ್ಲಿಸುವ ಮೂಲಕ ನಾವು ಸ್ಪಷ್ಟ ಸಂದೇಶವನ್ನು ರವಾನಿಸಬೇಕಿದೆ, ಈ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದರು.

ನೈರುತ್ಯ ಶಿಕ್ಷಕರ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಪ್ರಜ್ಞಾವಂತ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ನೀಡಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಮತದಾರರು ಮತವನ್ನು ನೀಡಿದ್ದು, ಅದೇ ರೀತಿ ಪರಿಷತ್ ಚುನಾವಣೆಯಲ್ಲೂ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ಜಿಲ್ಲಾ ಬಿಜೆಪಿ ಖಜಾಂಚಿ ಎನ್.ಡಿ.ಸತೀಶ್, ಪ್ರಧಾನ ಕಾರ್ಯದರ್ಶಿ ಸಿ.ಹೆಚ್.ಮಾಲತೇಶ್, ತಾಲ್ಲೂಕು ಅಧ್ಯಕ್ಷ ಮಲ್ಲೇಶಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರು ಕುಮಾರ್ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ-https://suddilive.in/archives/15266

Related Articles

Leave a Reply

Your email address will not be published. Required fields are marked *

Back to top button