ಕ್ರೈಂ ನ್ಯೂಸ್

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣು

ಸುದ್ದಿಲೈವ್/ಸೊರಬ

ಗೃಹಿಣಿಯೋರ್ವಳು ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ಪಟ್ಟಣದ ವಿದ್ಯುತ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯು ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಭೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ದತ್ತ ಸೊರಬ

ಇದನ್ನೂ ಓದಿ-https://suddilive.in/archives/15492

Related Articles

Leave a Reply

Your email address will not be published. Required fields are marked *

Back to top button