ಶೈಕ್ಷಣಿಕ ಸುದ್ದಿಗಳು

ನೀಟ್ ಪರೀಕ್ಷೆ-ತನಿಖೆಗೆ ಎನ್ ಎಸ್ ಯು ಐ ಆಗ್ರಹ

ಸುದ್ದಿಲೈವ್/ಶಿವಮೊಗ್ಗ

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಬೇಕು ಎಂದು NSUI ಆಗ್ರಹಿಸಿದೆ.

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂಬುದು ದೇಶಾದ್ಯಂತ ಇರುವ ವಿದ್ಯಾರ್ಥಿಗಳ ಆಗ್ರಹವಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು 67 ವಿದ್ಯಾರ್ಥಿಗಳು ಮೊದಲ ರ‍್ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಮಾಡಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಂತಿದೆ.

ರ‍್ಯಾಂಕ್ ಬಂದಿರುವವರಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿರುವುದು ಇನ್ನಷ್ಟು ಅನುಮಾನಗಳನ್ನು ಹುಟ್ಟಿಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಂದೇ ತರಬೇತಿ ಕೇಂದ್ರ ಇವೆಲ್ಲವೂ ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂಬುದು ವಿದ್ಯಾರ್ಥಿಗಳ ದೂರು.

ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಯುವ ಮುಖಂಡರಾದ H.C ಯೋಗೇಶ್ ರವರು ಮಾತನಾಡಿ ಕೇಂದ್ರ ಸರ್ಕಾರ
ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ನಂತರ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಕೂಡಲೇ ಮರು ಪರೀಕ್ಷೆ ನಡೆಬೇಕು ಎಂಬುದು ಇಡೀ ದೇಶದ ವೈದ್ಯಕೀಯ ಸೀಟು ಆಕಾಂಕ್ಷಿಗಳು ಹಾಗೂ NSUI ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಕಾರ್ಯಧ್ಯಕ್ಷ ರವಿ ಕಾಟಿಕೆರೆ, ಚಂದ್ರು ಜಿ ರಾವ್, ರವಿ, ಆಕಾಶ, ಟೋಪಿಕ್, ಜೀವನ್, ಲಿಂಗರಾಜು, ಗಿರೀಶ್, ಶಿವು, ಕುಮಾರ್, ಪ್ರದೀಪ್, ನಿಖಿಲ್,ಫರಾಜ್, ವರುಣ್ ವಿ ಪಂಡಿತ್, ನಾಗೇಂದ್ರ,ಸಾಗರ್,ಮಂಜು ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ-https://suddilive.in/archives/16662

Related Articles

Leave a Reply

Your email address will not be published. Required fields are marked *

Back to top button