ರಾಜಕೀಯ ಸುದ್ದಿಗಳು

ಇಂದು ಸಚಿವರಾದ ಮಧು ಬಂಗಾರಪ್ಪ ನಾಳೆ ಭೈರತಿ ಸುರೇಶ್ ಜಿಲ್ಲಾ ಪ್ರವಾಸ

ಸುದ್ದಿಲೈವ್/ಶಿವಮೊಗ್ಗ

ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾ ಪ್ರವಾಸ ಕೈಗೊಂಡಿದ್ದರೆ, ನಾಳೆ ಅ.27 ರಂದು ನಗರಾಭಿವೃದ್ಧಿ ಸಚಿವ ಹಾಗೂ  ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವ ಬಿ.ಎಸ್ ಸುರೇಶ್ (ಬೈರತಿ ಸುರೇಶ್) ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಿಗ್ಗೆ ಸಚಿವ ಮಧು ಬಂಗಾರಪ್ಪ ತಂದೆ ಎಸ್ ಬಂಗಾರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮವನ್ನ ಸೊರಬದ ಬಂಗಾರ ಧಾಮದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ  ಬೆಳಿಗ್ಗೆ 10 ಗಂಟೆಗೆ ಸೊರಬ ಪುರಸಭೆಯಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ನಂತರ ಶಿಕಾರಿಪುರದ ಹೊಸಮುಗಳಗೇರಿಯ ಭೀರಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಾಜ್ ಗೌಡರ ಭೇಟಿ ನಡೆಸಲಿದ್ದು, ಅಲ್ಲಿಂದ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ಅಮ್ಮ ಡೆಂಟಲ್ ಕ್ಲಿನಿಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸೊರಬದಲ್ಲಿ ದಿ.ಎಸ್.ಬಂಗಾರಪ್ಪನವರ ಅಭಿಮಾನ ಬಳಗದ ಮನರಂಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೈರತಿ ಸುರೇಶ್

ನಾಳೆ ಬೆಂಗಳೂರಿನ ಕೆಐಎಎಲ್ ವಿಮಾನ ನಿಲ್ದಾಣ ಟರ್ಮಿನಲ್-1 ರಲ್ಲಿ ಶಿವಮೊಗ್ಗಕ್ಕೆ ಇಂಡಿಗೋ 6ಇ 7731 ವಿಮಾನದ ಮೂಲಕ ಪ್ರಯಾಣ ಬೆಳಸುತ್ತಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 11-05 ಕ್ಕೆ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

ಬೆಳಿಗ್ಗೆ11-30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ, ಕೆಯುಐಡಿಎಫ್ ಸಿ, ಹಾಗೂ ಕನನೀಸ&ಒಚ(ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ) ನಿಗಮ, ನಗರ ಯೋಜನಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮತ್ತು ನಗರ ಹಾಗೂ ಗ್ರಾಮಾಂತರ ಯೋಜನಾ ಇಲಾಖೆಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆ ಸಂಜೆ 5 ರ ವರೆಗೆ ನಡೆಯಲಿದೆ.

ಸಂಜೆ 5-30 ಕ್ಕೆ ರಸ್ತೆ ಮಾರ್ಗದ ಮೂಲಕ ಚಿಕ್ಕಮಗಳೂರು ಜಿಲ್ಲೆತೆಯ ತರೀಕೆರೆ ಬಸ್ ನಿಲ್ದಾಣಕ್ಕೆ ತಲುಪಲಿದ್ದು, ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ಬಸ್ ನಿಲ್ದಾಣದ ಪರಿಶೀಲನ ನಡೆಯಲಿದೆ. ನಂತರ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ-https://suddilive.in/archives/1832

Related Articles

Leave a Reply

Your email address will not be published. Required fields are marked *

Back to top button