ಸ್ಥಳೀಯ ಸುದ್ದಿಗಳು

ಕನ್ನಡ ಏಕೀಕರಣಕ್ಕೆ 50 ರ ಸಂಭ್ರಮ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ವಿಶಿಷ್ಟವಾಗಿ ಆಚರಿಸುವ ಕುರಿತು ಸಚಿವ ಕನ್ನಡ ಮತ್ತು ಸಂಸ್ಕೃತಿ ಹಾಗೂ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ  ಶಿವರಾಜ ತಂಗಡಗಿ ಅವರ ಮನವಿ ಮೇರೆಗೆ ರಾಜ್ಯ ಸರ್ಕಾರ ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸಿದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸನ್ಮಾನ್ಯ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಈ  ಅಂಶಗಳನ್ನು ಪ್ರತಿಯೊಬ್ಬರು ಸಿದ್ಧತೆ ಮಾಡಿಕೊಳ್ಳಲು ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಕೋರಲಾಗಿದೆ.

1. ನವಂಬರ್ 01 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಅಯೊಂದಿಗೆ ಕರ್ನಾಟಕ ಸಂಭ್ರಮ-೮೦ “ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ” ಎಂದು ಘೋಷ ವಾಕ್ಯದ ರಂಗೋಲಿ ಬಿಡಿಸುವುದು.

2. ನವಂಬರ್-01ರ ಬೆಳಗ್ಗೆ 9.೦೦ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರೀಕರು ಎದ್ದು ನಿಂತು ಗೌರವ ಸಲ್ಲಿಸುವುದು.

3. ನವಂಬರ್ 01ರ ಸಂಜೆ 5.00ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿ ಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿ ಪಟ ಉತ್ಸವ ಆಚರಿಸುವುದು,

4. ನವಂಬರ್ 01ರಂದು ಸಂಜೆ 7.00ಗಂಟೆಗೆ ಜಿಲ್ಲೆಯ ಎಲ್ಲಾ ಮನೆ-ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದು.

ಈ ಎಲ್ಲಾ ಅಂಶಗಳೊಂದಿಗೆ ಶಿವಮೊಗ್ಗ ಜಿಲ್ಲೆಯ ಸಮಸ್ತ ನಾಗರೀಕರು ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು ನಾಡು-ನುಡಿಯ ಅಳವಡಿಸಿಕೊಂಡು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಕೋರಲಾಗಿದೆ.‌

ಇದನ್ನೂ ಓದಿ-https://suddilive.in/archives/2106

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): Failed to send buffer of zlib output compression (0) in /home/twzwscfi/suddilive.in/wp-includes/functions.php on line 5373