ಸ್ಥಳೀಯ ಸುದ್ದಿಗಳು

ನ.06 ರಂದು ಜನತಾದರ್ಶನ ಕಾರ್ಯಕ್ರಮ

ಸುದ್ದಿಲೈವ್/ಶಿವಮೊಗ್ಗ

ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನೇತೃತ್ವದಲ್ಲಿ ತಾಲ್ಲೂಕು ಜನತಾದರ್ಶನ ಕಾರ್ಯಕ್ರಮವನ್ನು ಸೊರಬದ ರಂಗಮಂದಿರದಲ್ಲಿ ನ.06 ರಂದು ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಸೊರಬ ತಾಲ್ಲೂಕಿನ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ.

ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೋಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೊಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯತಕ್ಕದ್ದು.

ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/2400

Related Articles

Leave a Reply

Your email address will not be published. Required fields are marked *

Back to top button