ಸ್ಥಳೀಯ ಸುದ್ದಿಗಳು

ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗಾಗಿ ಅರ್ಜಿ ಆಹ್ವಾನ

ಸುದ್ದಿಲೈವ್/ಶಿವಮೊಗ್ಗ

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗಾಗಿ 2023-2024ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ, ಸಹಾಯಧನ 50 ಸಾವಿರ ರೂ ಧನ ನೀಡಲಾಗುವುದು. ಶೇ.4 ರಷ್ಟು ಬಡ್ಡಿದರದಲ್ಲಿ ನೀಡಲಾಗುವುದು.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ)

ವ್ಯಾಪಾರ ಮತ್ತು ಇತರ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

ಘಟಕ ವೆಚ್ಚದ ಶೇ. 70ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.1.00 ಲಕ್ಷವಿದೆ.  ಘಟಕ ವೆಚ್ಚದ ಶೇ. 70ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.1.00 ಲಕ್ಷವಿದೆ. ಸರಕು ವಾಹನ /ಟ್ಯಾಕ್ಸಿ (ಹಳದಿ ಬೋರ್ಡ್‌) ಖರೀದಿಸುವ ಉದ್ದೇಶಕ್ಕೆ ಮಾತ್ರವಾಗಿರುತ್ತದೆ.  ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 4.00 ಲಕ್ಷ ನೀಡಲಾಗುತ್ತದೆ.

ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಠ 10 ಸದಸ್ಯರು ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು ಘಟಕ ವೆಚ್ಚ ರೂ. 2.50 ಲಕ್ಷ ಸಹಾಯಧನ: ರೂ 1.50 ಲಕ್ಷ ಸಾಲ: ರೂ. 1.00 ಲಕ್ಷ (ಶೇಕಡ 4ರಷ್ಟು ಬಡ್ಡಿದರ) ನಿಗದಿ ಪಡಿಸಲಾಗಿದೆ.

ಭೂ ಒಡೆತನ ಯೋಜನೆ

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು. ಘಟಕ ವೆಚ್ಚ ರೂ. 25,00 ಲಕ್ಷ ರೂ. 20,000 ಲಕ್ಷ ಸಹಾಯಧನ: ಶೇ. 50 ಸಾಲ: ಶೇ. 50 (ಶೇಕಡ 1ರಷ್ಟು ಬಡ್ಡಿದರ) ನೀಡಲಾಗುತ್ತದೆ.

ಗಂಗಾ ಕಲ್ಯಾಣ ಯೋಜನೆ

ಈ ಡಚ್ ಸಿ ರುವ ದಪ್ಪ, ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರು. ಹಾಗೂ ಶ್ರೀ ಬಿ. ನಾಗೇಂದ್ರ ಮಾನ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಸಿದರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂತಿರುವುದು

ಹೆಚ್ಚಿನ ಮಾಹಿತಿಗಾಗಿ  ರಾಘವೇಂದ್ರ ಜಿ. ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ  80508 54042 ಸಂಪರ್ಕಿಸ ಬಹುದಾಗಿದೆ.

ವಿಶೇಷ ಸೂಚನೆ: ನಿಗಮದ ನಿರ್ದೇಶಕ ಮಂಡಳಿ ವಿರೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಲ್ಲಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಒಂದು ಪೋರ್ಟಲ್ ಮೂಲಕವೇ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 29 ಕೊನೆಯ ದಿನಾಂಕವಾಗಿದೆ. ಐಡಿ https://sevasindhu.karnataka.gov.in

 

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): Failed to send buffer of zlib output compression (0) in /home/twzwscfi/suddilive.in/wp-includes/functions.php on line 5373