ಸ್ಥಳೀಯ ಸುದ್ದಿಗಳು

ಪೋಕ್ಸೋ ಆರೋಪಿಗೆ 20 ವರ್ಷ ಸಜೆ ಹಾಗ 1.25 ಲಕ್ಷ ರೂ.ದಂಡ

ಸುದ್ದಿಲೈವ್/ಶಿವಮೊಗ್ಗ

ಲೈಂಗಿಕ ದೌರ್ಜನ್ಯದಿಂದ ಮನನೊಂದ ಅಪ್ರಾಪ್ತ ಬಾಲಕಿ ನೇಣುಬಿಗಿದು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಸಜೆ 1,25,000 ರೂ ದಂಡ  ವಿಧಿಸಿ ತೀರ್ಪುನೀಡಿದೆ. ಮೃತ ಬಾಲಕಿಯ ಕುಟುಂಬಕ್ಕೆ 1,70,000 ರೂ. ಸರ್ಕಾರ ಪರಿಹಾರ ನೀಡುವಂತೆ ನಿನ್ನೆ ನ್ಯಾಯಾಲಯ ತೀರ್ಪು ನೀಡಿದೆ.

2020ನೇ ಸಾಲಿನಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 23 ವರ್ಷದ ಯುವಕನೊಬ್ಬನು 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಇದರಿಂದ ಮನನೊಂದ ಬಾಲಕಿಯು ನೇಣು ಹಾಕಿ ಕೊಂಡು ಮೃತಪಟ್ಟಿದ್ದಳು.  ಮೃತ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಸಿಪಿಐ ಗಿರೀಶ್ ಬಿ.ಸಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಶ್ರೀಮತಿ ಮಮತ ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದರು.

FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ,  ನ್ಯಾಯಾಧಿಶರಾದ ಶ್ರೀಮತಿ ಲತಾ ರವರು ನಿನ್ನೆ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1,25,000/- ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡ ಕಟ್ಟಲು ಆರೋಪಿ ವಿಫಲನಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಹಾಗೂ ಮೃತ ಬಾಲಕಿಯ ಕುಟುಂಬಸ್ಥರಿಗೆ ಪರಿಹಾರವಾಗಿ ಸರ್ಕಾರದಿಂದ 17,00,000/- ನೀಡಲು ಆದೇಶಿಸಿರುತ್ತಾರೆ.

ಇದನ್ನೂ ಓದಿ-https://suddilive.in/archives/2485

Related Articles

Leave a Reply

Your email address will not be published. Required fields are marked *

Back to top button