ಸ್ಥಳೀಯ ಸುದ್ದಿಗಳು
ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವರ್ಗಾವಣೆ

ಸುದ್ದಿಲೈವ್/ಶಿವಮೊಗ್ಗ

ಬಹಳ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಬಿಎಸ್ ವೈ ಆಪ್ತ ಸಿ.ಎಸ್.ಷಡಾಕ್ಷರಿ ಕೋಲಾರಕ್ಕೆ ವರ್ಗಾವಣೆಯಾಗಿದ್ದಾರೆ.
ಶಿವಮೊಗ್ಗದ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ, ಜಂಟಿ ನಿರ್ದೇಶಕರ ಕಚೇರಿಯ ಲೆಕ್ಕಾಧೀಕ್ಷಕರಾಗಿದ್ದ ಸಿ.ಎಸ್.ಷಡಾಕ್ಷರಿಯವರನ್ನ ಕೋಲಾರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಆಡಳಿತ ಮತ್ತು ಸಾರ್ವಾಜನಿಕ ಹಿತದೃಷ್ಟಿಯಿಂದ ವಿಧಾನ ಸೌಧದ ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ರಾಜ್ಯಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬೆಂಗಳೂರಿಗೆ ವರ್ಗಾವಣೆ ಪತ್ರ ಕಳುಹಿಸಿದ್ದಾರೆ.
ಈ ಕುರಿತು ರಾಜ್ಯಾಧ್ಯಕ್ಷರಿಗೆ ಸಂಪರ್ಕಿಸಿ ಪ್ರತಿಕ್ರಿಯೆ ಪಡೆದು ಪ್ರಯತ್ನಿಸಲಾಗಿತ್ತು. ಆದರೆ ಸಾಧ್ಯವಾಗಲಿಲ್ಲ.ಈ ವರ್ಗಾವಣೆಯಿಂದ ಅವರ ಅಧ್ಯಕ್ಷ ಸ್ಥಾನವೂ ಸಹ ಏನಾಗಲಿದೆ ಎಂಬ ಕುತೂಹಲ ಘಟ್ಟಕ್ಕೆ ಬಂದು ತಲುಪಿದೆ.
ಇದನ್ನೂ ಓದಿ-https://suddilive.in/archives/2667
