ಮುಳುವಾಯಿತೆ ಮಣ್ಣು?

ಸುದ್ದಿಲೈವ್/ಶಿವಮೊಗ್ಗ

ಅದೊಂದು ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಷಡಾಕ್ಷರಿಯವರ ವರ್ಗಾವಣೆಗೆ ಕಾರಣವಾಯಿತಾ? ಎಂಬ ಚರ್ಚೆ ಆರಂಭಗೊಂಡಿದೆ. ಸೆ.16 ರಂದು ಸಚಿವ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ನಡೆದ ಜಿಪಂ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಮುಳುವಾಗಿದೆ ಎನ್ನಲಾಗುತ್ತಿದೆ.
ಶಿವಮೊಗ್ಗ ತಾಲೂಕು: ಅಬ್ಬಲಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬ್ಬಲಗೆರೆ ಗ್ರಾಮದ ಸರ್ವೆ ನಂ.119ರಲ್ಲಿ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಮಣ್ಣನ್ನು ತೆಗೆದು ಖಾಸಗಿ ಲೇಔಟ್ ಗೆ ಸಾಗಿಸಿರುವ ಬಗ್ಗೆ ಮಣ್ಣಿನ ಒಟ್ಟು ರಾಯಲ್ಟಿ ಮೊತ್ತವನ್ನು ಪತಿಸದೆ ಸರ್ಕಾರದ ಬೊಕ್ಕಸಕ್ಕೆ ರೂ. 71,45,920/-ಗಳನ್ನು ನಷ್ಟ ಉಂಟು ಮಾಡಿರುವ ಬಗ್ಗೆ ಚರ್ಚೆ ನಡೆದಿತ್ತು.
ಮಣ್ಣು ಎತ್ತಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಬಗ್ಗೆ ಜಿಲ್ಲಾ ಪಂಚಾಯತ್ ನ ಪಂಚಾಯತ್ ರಾಜ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ವರದಿ ನೀಡಿದ್ದರು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಸಿ.ಎಸ್ ಪಡಾಕ್ಷರಿ ರವರ ನಿರ್ದೇಶನದಂತೆ ಗ್ರಾಮ ಪಂಚಾಯತ್ ಮತ್ತು ಗಣಿ ಇಲಾಖೆಯವರು ನಡೆದುಕೊಂಡಿರುವ ಬಗ್ಗೆ ಆಕ್ಷೇಪಣೆಗಳು ವ್ಯಕ್ತವಾಗಿದ್ದವು.
ಬೆಂಗಳೂರು ಸರ್ಕಾರಿ ನೌಕರರ ಸಂಘದ ರಾಜ್ಯ ಸರಿಷತ್ ಸದಸ್ಯರು, ಬಿ. ಗಂಗಾಧರ, ಹಾಗೂ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ, ಮತ್ತು ಜಿಲ್ಲೆಯ ಅನೇಕ ಸಂಘ ಸಂಸ್ಥೆಗಳು ಘಟನೆಯ ಬಗ್ಗೆ ತನಿಖೆ ನಡೆಸಿ 1 ಸಮಿತಿ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಲೆಕ್ಕಾಧೀಕ್ಷಕ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಕ್ಷರಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಇವರನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯಿಂದ ಬೇರೆಡೆಗೆ ವರ್ಗಾಯಿಸುವ ಕುರಿತು ಸರ್ಕಾರದ ಆರ್ಥಿಕ ಇಲಾಖೆಯನ್ನು ಕೋರಲಾಗಿತ್ತು.
ಅಲ್ಲದೇ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಷಡಾಕ್ಷರಿಯವರ ಹೆದರಿಕೆಯಲ್ಲಿ ಮತ್ತು ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿಯಿದೆ ಎಂದು ಸಹ ನಡೆದ ಜಿಲ್ಲಾ ಪರಿಶೀಲನಾ ಸಭೆಯ ಚರ್ಚೆಯಲ್ಲಿ ಪ್ರಸ್ತಾಪವಾಗಿರುತ್ತದೆ.
ಈ ಎಲ್ಲಾ ಅಂಶಗಳು ಸಚಿವ ಮಧು ಬಂಗಾರಪ್ಪನವರ ಸಭೆಯಲ್ಲಿ ಚರ್ಚೆ ಆಗಿತ್ತು.ಅಲ್ಲದೆ ಸಭೆಯಲ್ಲಿ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳಲು ಕೋರುತ್ತೇನೆ ಎಂದು ನಡವಳಿ ಪಾಸ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ವರ್ಗಾವಣೆ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ-https://suddilive.in/archives/2672
