ಸ್ಥಳೀಯ ಸುದ್ದಿಗಳು
ಹೋಟೆಲ್ ಮಾಲೀಕ ಆತ್ಮಹತ್ಯೆ

ಸುದ್ದಿಲೈವ್/ತೀರ್ಥಹಳ್ಳಿ:

ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ.
ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ-https://suddilive.in/archives/2726
