ರಾಜ್ಯ ಸುದ್ದಿಗಳು

ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತದಾರರ ಪಟ್ಟಿ ಸಿದ್ದತೆಗೆ ವೇಳಾಪಟ್ಟಿ

ಸುದ್ದಿಲೈವ್/ಶಿವಮೊಗ್ಗ

ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ಕೂಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ (ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲ್ಲೂಕುಗಳು) ಜಿಲ್ಲಾಧಿಕಾರಿಗಳನ್ನು, ಆಯುಕ್ತರು, ಮಹಾನಗರ ಪಾಲಿಕೆ ಮಂಗಳೂರು ಮತ್ತು ಶಿವಮೊಗ್ಗ ಹಾಗೂ ಆಯಾ ಉಪವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ.

ಅರ್ಹತಾ ದಿನಾಂಕ 01.11.2023 ಕ್ಕೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.
ಭಾರತ ಚುನಾವಣಾ ಆಯೋಗವು ದಿನಾಂಕ 09.08.2023ರ ಪತ್ರದನ್ವಯ ಕರ್ನಾಟಕ ನೈರುತ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸಲಾಗು ತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನ 18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ. ನೈರುತ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲು ಈ ಕೆಳಗಿನಂತ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ನಮೂನೆ 18 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ಮತ್ತು ದಿನ 06.11.2023.
ಕರಡು ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಮತ್ತು ದಿನ 23.11.2023. ಹಕ್ಕು ಮತ್ತು ಆಕ್ಷೇಪಣೆಗಾಗಿ ನಿಗದಿಪಡಿಸಿರುವ ಅವಧಿ 23.11.2023 ರಿಂದ 09.12.2023. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಮತ್ತು ದಿನ 30.12.2023 ಆಗಿರುತ್ತದೆ.
ಕರ್ನಾಟಕ ನೈರುತ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಈ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸುವುದು;

  • ಅರ್ಹತಾ ದಿನಾಂಕ: 01.11.2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01.11.2020 ಕ್ಕಿಂತಲು ಹಿಂದೆ ಮಾನ್ಯತ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು,
  • ದಿನಾಂಕ: 01.11.2020 ಕ್ಕಿಂತಲೂ ಮೊದಲು ಪದವಿ ಪಡೆದಿರುವವಂತಹ ಪದವೀಧರರು ನಿಗದಿಪಡಿಸಿದ ನಮೂನೆ 18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂದೃಢೀಕರಿಸಿ ಅಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ದಿನಾಂಕ 06.11.2023 ಒಳಗಾಗಿ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಸಿಲ್ದಾರ್ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
  • ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ, ಇಲಾಖಾ ಮುಖ್ಯಸ್ಥರು ತಮ್ಮ ಆಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ದಿನಾಂಕ 05.11. 2023ರ ಒಳಗಾಗಿ ನೀಡಬಹುದು.
  • ವಕೀಲರು, ವೈದ್ಯರು, ಚಾರ್ಟೆಡ್ ಅಕೌಂಟೆಂಟರು ಹಾಗೂ ನೋಂದಾಯಿತ ಇಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು.
  •  ಪ್ರಮಾಣ ಪತ್ರದೊಡನೆ ಕ್ಲೇಮುದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬಂಧಪಟ್ಟ ವಿಶ್ವ್ವವಿದ್ಯಾಲಯದ ರಿಜಿಸ್ಟ್ರಾರ್ ಗಳಿಂದ ಪ್ರಮಾಣ ಪತ್ರ ಪಡೆದು ಅರ್ಜಿ ಸಲ್ಲಿಸಬಹುದು.
  •  ಫಾರಂ-18 ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಅಧಿಕಾರಿಗಳಿಗೆ ಒದಗಿಸಲಾಗಿದೆ. ಫಾರಂ-18 ನ ಅರ್ಹ ಮತದಾರರು ಉಚಿತವಾಗಿ ಸಂಬಂಧಪಟ್ಟ ಕಚೇರಿಯಿಂದ ಪಡೆಯಬಹುದಾಗಿದೆ.
  • ಅರ್ಹ ಪದವೀಧರರು, ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ಗುರುತಿನ ಚೀಟಿಯ ಎಪಿಕ್ ನಂಬರ್ ಗೆ ಮಾಹಿತಿಯನ್ನು ಒದಗಿಸತಕ್ಕದ್ದು  ಅರ್ಹ ಪದವೀಧರರು ಮೂಲ ಪದವಿ ಪ್ರಮಾಣ ಪತ್ರ ಮತ್ತು ಅದರ ಪ್ರತಿಯನ್ನು ಸ್ವಯಂ ದೃಢೀಕರಿಸಿಕೊಂಡು, ಗೊತ್ತುಪಡಿಸಿದ ಅಧಿಕಾರಿಯ ಮುಂದೆ ಖುದ್ದು ಹಾಜರಾಗಿ ಅವರಿಂದ ದೃಢೀಕರಿಸಿಕೊಂಡು ಅವರಲ್ಲಿಯೇ ಅರ್ಜಿಯನ್ನು ಕಡ್ಡಾಯವಾಗಿ ನೀಡಬೇಕು,
  • ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಿದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತು ಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡುತ್ತಾರೆ. ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕøತಗೊಳ್ಳುತ್ತದೆ.
  • ಬಲ್ಕ್ (ಗುಚ್ಛಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
  • ಆಯೋಗವು ಮುಂಬರುವ ದಿನಗಳಲ್ಲಿ ಸದರಿ ನಮೂನ 18 ರ ಅರ್ಜಿಗಳನ್ನು ಇಆರ್‍ಎಂಎಸ್ ನಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ.
  • ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳುವ ಕುರಿತು ಹಾಗೂ ಚುನಾವಣಾ ಪೂರ್ವ ತಯಾರಿ ಮಾಡಿಕೊಳ್ಳುವಂತೆ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಈ ಕಾರ್ಯಾಲಯದಿಂದ ನಿರ್ದೇಶನ ನೀಡಲಾಗಿದೆ.
  • ಕರ್ನಾಟಕ ನೈರುತ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣಿಗಳು ಇದ್ದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಸೀಲ್ದಾರ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು ಎಂದು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತದಾರರ ನೊಂದಣಾದಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/2023/09/30/ಮಸರಹಳ್ಳಿ-ಭದ್ರಾವತಿ-ರೈಲ್ವೆ/

Related Articles

Leave a Reply

Your email address will not be published. Required fields are marked *

Back to top button