ಉದ್ಯೋಗ ಸುದ್ದಿಗಳು
ನೇರ ಸಂದರ್ಶನಕ್ಕೆ ಕರೆ

ಸುದ್ದಿಲೈವ್/ಶಿವಮೊಗ್ಗ

ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನದ ವ್ಯವಸ್ಥೆ ಮಾಡಲಾಗುದೆ.
ನ.20 ರಂದು ಬೆಳಗ್ಗೆ 11.00 ರಿಂದ ಮ. 2.00 ರವೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ನಿಗಧಿತ ಸಮಯದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಐ.ಡಿ.ಎಸ್.ಪಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ-https://suddilive.in/archives/3000
