ಸ್ಥಳೀಯ ಸುದ್ದಿಗಳು
ಕೆರೆಗೆ ಉರುಳಿ ಬಿದ್ದ ಕಾರು

ಸುದ್ದಿಲೈವ್/ರಿಪ್ಪನ್ ಪೇಟೆ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ತಾವರೆ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ.
ಬೆಂಗಳೂರಿನಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದಾಗ ಹೊಸನಗರ ರಸ್ತೆಯ ತಾವರೆ ಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ.
ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಕೂಡಲೇ ಅಪಘಾತಗೊಂಡವರ ಸಹಾಯಕ್ಕೆ ತೆರಳಿದ ಹಿನ್ನಲೆಯಲ್ಲಿ ಭಾರಿ ಅನಾಹುತ ತಪ್ಪಿದೆ ಎನ್ನಲಾಗುತ್ತಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ-https://suddilive.in/archives/3251
