ರಾಗಿಗುಡ್ಡದಲ್ಲಿ ನಡೆದ ಗಲಭೆ ಕುರಿತು ಎಸ್ಪಿ ಹೇಳಿದ್ದೇನು?

ಸುದ್ದಿಲೈವ್/ಶಿವಮೊಗ್ಗ

ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರ ನಂತರ ವಾತಾವರಣ ಪ್ರಕ್ಷುಬ್ಧಗೊಂಡಿತ್ತು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಗಲಭೆ ಕುರಿತು ಪ್ರತಿಕ್ರಿಯೆ ನೀಡಿದರು.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಸ್ಥಳಕ್ಕೆ ಹೋದಾಗ ಕೆಲವರು ನಮ್ಮ ಮಾತಿಗೆ ಒಪ್ಪಿದ್ರು, ಆದರೆ ಕೆಲವರು ಒಪ್ಪಲಿಲ್ಲ. ಹುಡುಗರ ಗುಂಪೊಂದು ದಾಂಧಲೆಗೆ ಸಿದ್ಧತೆ ಮಾಡಿಕೊಂಡಿತ್ತು. ಕೆಲವರು ದಾಂಧಲೆ ನಡೆಸಿದ್ರು. ಹೀಗಾಗಿ ನಾವು ಹೆಚ್ಚುವರಿ ಬಲ ನಿಯೋಜಿಸಿದ್ವಿ ಎಂದರು.
144 ಸೆಕ್ಷನ್ ಕೂಡ ಆ ಪ್ರದೇಶದಲ್ಲಿ ಜಾರಿ ಮಾಡಿದ್ವಿ. ಈಗ ಪರಿಸ್ಥಿತಿ ಹತೋಟಿಯಲ್ಲಿದೆ. ಯಾವುದೇ ತೊಂದರೆ ಆಗಿಲ್ಲ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರು, ಆಸ್ತಿಪಾಸ್ತಿ ಹಾನಿಗೊಳಗಾದವರು ದೂರು ಕೊಡುವಂತೆ ಹೇಳಿದ್ದೇವೆ ಎಂದು ತಿಳಿಸಿದರು.
ಕೆಲವರನ್ನು ಈಗಾಗಲೇ ವಶಕ್ಕೆ ತೆಗೆದುಕೊಂಡಿದ್ದೇವೆ. ಎಷ್ಟು ಜನ ವಶಕ್ಕೆ, ಎಷ್ಟು ದೂರುಗಳು ದಾಖಲಾಗಿವೆ ನಂತರ ತಿಳಿಸುತ್ತೇನೆ. ಸಾರ್ವಜನಿಕರು ಸಹಿತ ಪೊಲೀಸರಿಗೂ ಗಾಯಗಳಾಗಿವೆ. ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳ ಕೃತ್ಯವನ್ನು ವಿಡಿಯೋಗಳಲ್ಲಿ ಪರಿಶೀಲಿಸಲಾಗುತ್ತಿದೆ. ತಪ್ಪಿತಸ್ಥರ ಮೇಲೆ ಶಿಕ್ಷೆ ಆಗುವಂತೆ ಕ್ರಮಕೈಗೊಳ್ಳುತ್ತೇವೆ. ಕೆಲವೊಂದನ್ನ ಪೊಲೀಸರೇ ದೂರು ದಾಖಲಿಸಿಕೊಂಡಿದ್ದಾರೆ. ಕೆಲವೊಂದು ದೂರನ್ನ ಸಾರ್ವಜನಿಕರು ನೀಡಿದ್ದಾರೆ ಎಂದರು.
ಇದನ್ನೂ ಓದಿ-https://suddilive.in/2023/10/01/ರಾಗಿಗುಡ್ಡದಲ್ಲಿ-ಗಲಭೆ-ಶಾಸಕ/
