ಶೈಕ್ಷಣಿಕ ಸುದ್ದಿಗಳು

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕು|| ಧನುಶ್ರೀಗೆ ಪ್ರಥಮ ಸ್ಥಾನ

ಸುದ್ದಿಲೈವ್/ಶಿವಮೊಗ್ಗ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು, ಪದವಿ/ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.

ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಶಿವಮೊಗ್ಗದ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಕು|| ಧನುಶ್ರೀ ಪ್ರಥಮ ಸ್ಥಾನ ಗಳಿಸಿರುತ್ತಾರೆ.

ಗಾಂಧೀಜಿಯವರ ಸಾಮಾಜಿಕ, ಆರ್ಥಿಕ, ಸ್ವರಾಜ್ ಚಿಂತನೆಗಳು, ಸತ್ಯ, ಅಹಿಂಸೆ ತತ್ವಗಳು, ಜಾತ್ಯಾತೀತ ನಿಲುವುಗಳು, ಸೌಹಾರ್ದತೆ, ಸ್ವಾವಲಂಬನೆಯ ಬದುಕು, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು.
ಧನುಶ್ರೀಯವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

ಇದನ್ನೂ ಓದಿ-https://suddilive.in/archives/3624

Related Articles

Leave a Reply

Your email address will not be published. Required fields are marked *

Back to top button