ಕ್ರೈಂ ನ್ಯೂಸ್

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಹಳೆಯ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ. ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಮಾಹಿತಿಯ ಆಧಾರದ ಮೇರೆಗೆ ಈ ಶವ ಪತ್ತೆಯಾಗಿದೆ. ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿರುತ್ತದೆ.

ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಕೂದಲು, ಕುರುಚಲು ಕಪ್ಪು ಗಡ್ಡ ಮೀಸೆ ಬಿಟ್ಟಿರುತ್ತಾನೆ. ಮೃತ ವ್ಯಕ್ತಿಯು ಗ್ರೇ ಕಲರ್ ತುಂಬು ತೋಳಿನ ಶರ್ಟ್, ಗ್ರೇ ಕಲರ್ ಮತ್ತು ನೀಲಿ ಬಣ್ಣದ ಬನಿಯನ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಬಟ್ಟೆಗಳು ಹರಿದು ರಕ್ತಮಯವಾಗಿರುತ್ತದೆ.

ಈ ಸಾವು ಹೇಗೆ ನಡೆದಿದೆ ಎಂಬುದು ತಿಳಿದು ಬರಬೇಕಿದೆ. ಈತನ ವಾರಸುದಾರರು ಯಾರದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹುದೆಂದು ರೈಲ್ವೆ ಪೊಲೀಸ್ ಠಾಣೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/4712

Related Articles

Leave a Reply

Your email address will not be published. Required fields are marked *

Back to top button