ಸ್ಥಳೀಯ ಸುದ್ದಿಗಳು

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ಅತಿಥಿ ಉಪನ್ಯಾಸಕರ ಸೇವಾ ಖಾಯಾಂತಿಗೆ ಆಗ್ರಹಿಸಿ ಇಂದು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ವಿಭಾಗ ಶಿವಮೆಗ್ಗದ ಜಂಟಿ ನಿರ್ದೇಶಕರ ಕಚೇರಿ ಮುಂಭಾಗ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರ ಸೇವೆಯನ್ನು ಅವಲಂಭಿಸಿದ್ದು, ಕಳೆದ ೧೫-೨೦ ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿದ್ದು, ಇಂದು ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಈ ಅತಿಥಿ ಎಂಬ ಅನಿಷ್ಠ ಪದ್ಧತಿಯನ್ನು ಮುಕ್ತಾಯ ಮಾಡಿ ಸೇವಾ ಖಾಯಾಂತಿ ನೀಡಬೇಕು. ಒಂದು ವೇಳೆ ಖಾಯಂಗೊಳಿಸದಿದ್ದರೆ, ರಾಜದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಮುಂಭಾಗ ಅರ್ನಿಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.

ಈಗಾಗಲೇ ಹಿಂದೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರವರು ವಿರೋಧ ಪಕ್ಷದಲ್ಲಿ ಇದ್ದಾಗ ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಕುರಿತು ಸದನದಲ್ಲಿ ಚರ್ಚೆ ನಡೆಸಿದ್ದರು.

ಖಾಯಂಗೊಳಿಸುವಂತ್ತೆ ಆಗ್ರಹಿಸಿದ್ದರು. ಈಗ ಅವರದೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಅತಿಥಿ ಉಪನ್ಯಾಸಕರನ್ನು ಸೇವಾ ಖಾಯಂತಿ ಮಾಡಬೇಕು ಸಚಿವ ಸಂಪುಟದಲ್ಲಿ ಚರ್ಚಿಸಿ ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು. ಈಗಾಗಲೇ ಪಶ್ಚಿಮ ಬಂಗಾಳ, ಪಂಜಬ್, ಹರಿಯಾಣ, ದೆಹಲಿ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅತಿಥಿ/ಅರೆಕಾಲಿಕ/ಗುತ್ತಿಗೆ ಆಧಾರಿತ ಉಪನ್ಯಾಸಕರನ್ನು ಖಾಯಂಗೊಳಿಸಲಾಗಿದೆ.

ಆಗಾಗಿ ಪ್ರಸ್ತುತ೨೦೨೩/೨೪ನೇ ಶೈಕ್ಷಣಿಕ ವರ್ಷದಿಂದಲೇ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಸೇವಾ ಖಾಯಂತಿ ನೀಡಬೇಕು ಎಂದು ಮನವಿಯಲ್ಲಿ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಡಾ. ಯಶೋಧರ್, ಸುವರ್ಣಮ್ಮ, ಡಾ.ಜಗದೀಶ್, ಶಕೀಲ್ ಅಹಮ್ಮದ್, ಶಿವಕುಮಾರ್, ನಾಗರ್ಷ, ವಸಂತಕುಮಾರ್ ಹಾಗೂ ಶಿವಮೆಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ-https://suddilive.in/archives/3851

Related Articles

Leave a Reply

Your email address will not be published. Required fields are marked *

Back to top button