ಸ್ಥಳೀಯ ಸುದ್ದಿಗಳು

ಬೀದಿ ನಾಯಿಗಳ ದಾಳಿಯಿಂದ ರಕ್ಷಿಸುವಂತೆ ಮನವಿ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕ ಪ್ರದೇಶ ಕಾಂಗ್ರೆ‌ಸ್‌ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗ ಇಂದು ಬೀದಿನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರ ಪ್ರಾಣ ರಕ್ಷಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಶಿವಮೊಗ್ಗ ನಗರದ ಜಯನಗರ, ಬಸವನಗುಡಿ, ನೆಹರೂ ಸ್ಟೇಡಿಯಂ, ರವೀಂದ್ರ ನಗರ ಮತ್ತು ಗಾಂಧಿನಗರ ಸುತ್ತಮುತ್ತಲ ಏರಿಯಾಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿನಾಯಿಗಳನ್ನು ನಿಯಂತ್ರಿಸುವಲ್ಲಿ ಪಾಲಿಕೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಙದು ಮನವಿಯಲ್ಲಿ ಆರೋಪಿಸಲಾಗಿದೆ.

ಈ ಏರಿಯಾಗಳಲ್ಲಿ ದಿನೇ ದಿನೇ ಬೀದಿ ನಾಯಿಗಳ ಹಾವಳಿ ಮಿತಿ ಮೀರುತ್ತಿದೆ. ಸಾರ್ವಜನಿಕರು, ವಯೋವೃದ್ದರು, ಮಕ್ಕಳು ಓಡಾಡುವುದೇ ಕಷ್ಟವಾಗುತ್ತಿದೆ. ಬೈಕ್ ಸವಾರರನ್ನು ನಾಯಿಗಳು ಆಟ್ಟಿಸಿಕೊಂಡು ಹೋಗಿ ಕಚ್ಚುತ್ತಿವೆ. ಭಯಭೀತರಾದ ಬೈಕ್ ಸವಾರರು ಅಪಘಾತಕ್ಕೊಳಗಾಗುತ್ತಿದ್ದಾರೆ.

ಈಗಾಗಲೇ ಹಲವಾರು ಸಾರ್ವಜನಿಕರು ಬೀದಿನಾಯಿಗಳಿಂದ ಕಡಿತಕ್ಕೊಳಗಾಗಿದ್ದಾರೆ. ಪ್ರತಿ ವರ್ಷ ಮಹಾನಗರ ಪಾಲಿಕೆ ವತಿಯಿಂದ ನಾಯಿಗಳ ಸಂತಾನಹರಣ ಚಿಕಿತ್ಸೆ ಮಾಡಲಾಗುತ್ತಿತ್ತು.

ಆದರೆ, ಇತ್ತೀಚಿನ ವರ್ಷಗಳಲ್ಲಿ ಸಂತಾನಹರಣ ಚಿಕಿತ್ಸೆ ಮಾಡದೇ ಇರುವುದರಿಂದ ನಾಯಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೂಡಲೇ ಪಾಲಿಕೆ ಅಧಿಕಾರಿಗಳು ನಾಯಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಪ್ರಾಣ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ-https://suddilive.in/archives/2297

Related Articles

Leave a Reply

Your email address will not be published. Required fields are marked *

Back to top button