ಸ್ಥಳೀಯ ಸುದ್ದಿಗಳು

ಮೆಟ್ರಿಕ್‍ಪೂರ್ವ ವಿದ್ಯಾರ್ಥಿವೇನತಕ್ಕೆ ಅರ್ಜಿ ಆಹ್ವಾನ

ಸುದ್ದಿಲೈವ್/ಶಿವಮೊಗ್ಗ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಿಂದಿನ ಸಾಲಿನಲ್ಲಿ ತಿರಸ್ಕøತಗೊಂಡು ವಿದ್ಯಾರ್ಥಿವೇತನ ಪಡೆಯದಿರುವ ವಿದ್ಯಾರ್ಥಿಗಳು ಹಾಗೂ ಹಿಂದೆ ಅರ್ಜಿ ಸಲ್ಲಿಸದಿರುವ ಮತ್ತು 2023-24 ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿಗಳನ್ನು ಇಲಾಖಾ ವೆಬ್‍ಸೈಟ್ www.sw.kar.nic.inಮತ್ತು http://ssp.karnataka.gov.in ನಲ್ಲಿ ಅ.20 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 08182-240512 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button