ಸ್ಥಳೀಯ ಸುದ್ದಿಗಳು

ಸಚಿವರ ವಿರುದ್ಧ ಪತ್ರಕರ್ತರ ಪ್ರತಿಭಟನೆ

ಸುದ್ದಿಲೈವ್/ಸಾಗರ

ಸಾಗರದ ಪತ್ರಕರ್ತರ ಆತ್ಮ ಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.

ಪತ್ರಕರ್ತರಿಂದ ಸಾಗರದ ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಕಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಶುಕ್ರವಾರ ಸಾಗರದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪತ್ರಕರ್ತರಿಗೆ ಅವಮಾನಿಸಿದ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಕರ್ನಾಟಕ ರಾಜ್ಯ ಕಾರ್ಯನಿರ್ತ ಪತ್ರಕರ್ತರ ಸಂಘದ ಸದಸ್ಯರು ಬೀದಿಗಿಳಿಯುವಂತೆ ಮಾಡಿದೆ.

ಸದಸ್ಯತ್ವ ವ್ಯಾಲ್ಯೂ ಇಲ್ಲ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಸಂಘಕ್ಕೆ ಅವಮಾನ ಮಾಡಿದ್ದಾರೆ ಹಾಗೂ ಜಿಲ್ಲಾ ವಾರ್ತಾ ಇಲಾಖೆಯ ಪ್ರಭಾರ ವಾರ್ತಾಧಿಕಾರಿ ವಿರುದ್ಧವೂ ದೂರಲಾಗಿದೆ.

ಪತ್ರಕರ್ತರ ಆತ್ಮ ಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಯಿಸಲಾಗಿದೆ. ಪತ್ರಕರ್ತರಿಗೆ ಅವಮಾನಿಸಿದ ಸಚಿವರು ಕ್ಷಮೆ ಕೇಳುವಂತೆ ಒತ್ತಾಯಿಸಲಾಗಿದೆ.

ಕ್ಷಮೆ ಕೇಳದಿದ್ದಲ್ಲಿ ರಾಜ್ಯದಾದ್ಯಂತ ಸಚಿವರ ವಿರುದ್ಧ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ. ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಪತ್ರಕರ್ತರು ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ-https://suddilive.in/archives/4273

Related Articles

Leave a Reply

Your email address will not be published. Required fields are marked *

Back to top button