ಕ್ರೈಂ ನ್ಯೂಸ್

ಲೈಂಗಿಕ ಕಿರುಕುಳ, ಶಿಕ್ಷಕರ ಅಮಾನತು

ಸುದ್ದಿಲೈವ್/ಶಿಕಾರಿಪುರ

ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ.

ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ.

ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆಪಾದನೆಯಿಂದಾಗಿ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಲೈಂಗಿಕ ಕಿರುಕುಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ನಡುವೆ ಬಂದ ಆರೋಪಗಳ ಅಧಾರದ ಮೇಲೆ ಬಿಇಒ‌ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಡಿಡಿಪಿಐ ಅವರಿಗೆ ವರದಿ‌ ನೀಡಿದ್ದಾರೆ.‌ ಇದರ ಆಧಾರದ ಮೇಲೆ‌ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ-https://suddilive.in/archives/4498

Related Articles

Leave a Reply

Your email address will not be published. Required fields are marked *

Back to top button