ರಾಜಕೀಯ ಸುದ್ದಿಗಳು

ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ‌ ಅಳವಡಿಸುವಂತೆ ಆಗ್ರಹ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಕೆ.ಎಸ್.ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವಂತೆ ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ನವರಕ್ಷಣೆ ವೇದಿಕೆ ಬಸ್ ನಿಲ್ದಾಣದ ಎದುರುಗಡೆ ಪ್ರತಿಭಟಿಸಿದೆ.

ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಮಾಡಿರುವ ಸಂಘಟನೆ  ನಗರದ ಹೃದಯಭಾಗದಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರತಿದಿನ ರಾಜ್ಯದ ಹಲವಾರು ಜಿಲ್ಲೆಗಳ ಸಾವಿರಾರು ಪ್ರಯಾಣಿಕರು ಪ್ರಯಾಣ ಮಾಡಲು ಆಗಮಿಸುತ್ತಾರೆ.

ಆದರೆ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವು ಇತ್ತೀಚೆಗೆ ಕಳ್ಳಕಾಕರ ತಾಣವಾಗಿ ಮಾರ್ಪಾಡಾಗಿದ್ದು, ಈ ವರ್ಷ ಸುಮಾರು 21 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಬಸ್ ನಿಲ್ದಾಣದಲ್ಲಿ ಸರಿಯಾದ ಸಿ.ಸಿ. ಟಿವಿ ಕ್ಯಾಮೆರಾಗಳು ಇಲ್ಲದೇ ಇರುವುದರಿಂದ ಪ್ರಯಾಣಿಕರ ಸೋಗಿನಲ್ಲಿರುವ ಕಳ್ಳರನ್ನು ನಿಖರವಾಗಿ ಗುರುತಿಸಿ ಹಿಡಿಯಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ.

ಈ ಸಂಬಂಧ ಈಗಾಗಲೇ ಕೆಲ ಸಾಮಾಜಿಕ ಸಂಘಟನೆಗಳು ಕೆ.ಎಸ್.ಆರ್.ಟಿ.ಸಿ.ಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಮೂಲಕ ನಿಗಮಕ್ಕೆ ದೂರು ನೀಡಿದ್ದರೂ ಅಧಿಕಾರಿಗಳ ಬೇಜವಾಬ್ದಾರಿ ತನದಿಂದ ಈವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಆಯಕಟ್ಟಿನ ಸ್ಥಳಗಳಲ್ಲೆಲ್ಲಾ ಉತ್ತಮ ಗುಣಮಟ್ಟದ ಸಿ.ಸಿ. ಕ್ಯಾಮೆರಾ ಅಳವಡಿಸಿ, ಗಸ್ತು ಸಿಬ್ಬಂದಿಗಳನ್ನು ನೇಮಿಸುವುದು ಸೇರಿದಂತೆ ಪೊಲೀಸ್ ಉಪಠಾಣೆ ತೆರೆದು ಈ ಸರಣಿ ಕಳ್ಳತನ ಪ್ರಕರಣಗಳಿಗೆ ಅಂತ್ಯ ಕಾಣಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ. ಒಂದು ವೇಳೆ ಶೀಘ್ರವಾಗಿ ಕ್ರಮ ಕೈಗೊಳ್ಳದಿದ್ದರೆ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧವೇ ಉಗ್ರಹೋರಾಟ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಸಿದೆ.

ಸಂಘಟನೆಯ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ, ಜಿಲ್ಲಾಧ್ಯಕ್ಷ ಸಂತೋಷ್, ಕಾರ್ಯಾಧ್ಯಕ್ಷ  ನಿಂಗರಾಜು, ಸಂಚಾಲಕರು ಕುಮಾರ್, ಮಹಿಳಾ ಘಟಕದ ನಯನ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ-https://suddilive.in/archives/4821

Related Articles

Leave a Reply

Your email address will not be published. Required fields are marked *

Back to top button