ಸ್ಥಳೀಯ ಸುದ್ದಿಗಳು

ಗೋಂದಿ ನಾಲೆಯ ಕೊನೆ ಹಂತದ ರೈತನಿಗೆ ಕೊಡಿ ಎಂದು ಆಗ್ರಹಿಸಿ ರೈತರ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ಭದ್ರ ಗೋಂದಿ ನಾಲೆಯ ಕೊನೆ ಅಂಚಿನ ರೈತರಿಗೆ ನೀರು ದೊರೆಯುತ್ತಿಲ್ಲ. ಈ ನಾಲೆಯ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು ನಾಲೆಯ ಕಾಮಗಾರಿಯನ್ನ ಸರಿಪಡಿಸಬೇಕೆಂದು ಆಗ್ರಹಿಸಿ ಇಂದು‌ ರಾಜ್ಯ ರೈತ ಸಂಘ ವಿವಿಧ ಸಂಘಟನೆಯ ಸಾಮೂಹಿಕ ನಾಯಕತ್ವದಲ್ಲಿ ಪ್ರತಿಭಟನೆ ನಡೆದಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಇಂದು ‍ಸಂಘಟನೆ ಪ್ರತಿಭಟನೆ ನಡೆಸಿದೆ. 2016-18 ರವರೆಗೆ 165 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಈ ಕಾಮಗಾರಿ ಅವೈಜ್ಞಾನಿಕವಾಗಿರುವುದರಿಂದ ಕೊನೆಯ ಹಂತದ ರೈತರಿಗೆ ನೀರು ಒದಗಿಸಲು ಸಾಧ್ಯವಾಗಿಲ್ಲ.

ಕಾರಣ ರೈತ ಈ ಬೀಕರ ಬರಗಾಲದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾನೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿಗಳ ಜನಸ್ಪಂಧನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಸರಿಪಡಿಸುವಂತೆ ಕೋರಲಾಗಿದೆ.

ಇದನ್ನೂ ಓದಿ-https://suddilive.in/archives/10622

Related Articles

Leave a Reply

Your email address will not be published. Required fields are marked *

Back to top button