ಸ್ಥಳೀಯ ಸುದ್ದಿಗಳು

ಸಿ.ಎಸ್ ಷಡಕ್ಷರಿಯವರ ಸದಸ್ಯತ್ವವನ್ನ ಅಮಾನತ್ತಿನಲ್ಲಿಡಲು ಮನವಿ -ನಿಯಮಾನುಸಾರ ಅವಕಾಶ ಇಲ್ಲ ಎಂದ್ರು ರಾಜ್ಯಾಧ್ಯಕ್ಷರು

ಸುದ್ದಿಲೈವ್/ಶಿವಮೊಗ್ಗ

ಸಿ.ಎಸ್ ಷಡಕ್ಷರಿ ಅವರ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯತ್ವವನ್ನು ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತ್ಯಾ ಹಾಗೂ ದತ್ತವಾದ ಅಧಿಕಾರದನ್ವಯ ಪರಿಶೀಲಿಸಿ ನಿಯಮಾನುಸಾರ ತುರ್ತಾಗಿ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಕಛೇರಿಗೆ ವರದಿ ಸಲ್ಲಿಸುವಂತೆ ಸಹಕಾರ ಸಂಘಗಳ ಜಿಲ್ಲಾ ನೋಂದಣಾಧಿಕಾರಿ ಶಶಿಧರ.ಪಿ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಶಿವಮೊಗ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಲೆಕ್ಕಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಎಸ್. ಷಡಕ್ಷರಿ ಅವರನ್ನು ಕೋಲಾರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಖಾಲಿ ಇರುವ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿರುತ್ತದೆ.

ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ-ಉಪವಿಧಿ ಅನುಸಾರ “ಸದಸ್ಯತ್ವ ಮುಂದುವರಿಕೆಯನ್ನು ಸಿ.ಎಸ್ ಷಡಕ್ಷರಿ ಮುಂದಿನ ಅನ್ ಹೊಂದುವವರೆಗೆ-ವರ್ಗಾವಣೆಗೊಂಡ ಕಛೇರಿ ಕರ್ತವ್ಯಕ್ಕೆ ಹಾಜರಾಗುವವರೆಗೆ ಅಮಾನತ್ತಿನಲ್ಲಿಟ್ಟು ಸೂಕ್ತ ಆದೇಶ ಹೊರಡಿಸುವಂತೆ ರಾಜ್ಯ ಪರಿಷತ್ ಸದಸ್ಯ ಬಿ. ಗಂಗಾಧರ ಇವರು ವಿನಂತಿಸಿಕೊಂಡಿರುತ್ತಾರೆ ಎಂದು ತಿಳಿಸಿದ್ದಾರೆ.

ಅದರಂತೆ, ರಾಜ್ಯ ಪರಿಷತ್ ಸದಸ್ಯ ಬಿ. ಗಂಗಾಧರ ಅವರ ಅರ್ಜಿಯನ್ನು ಪರಿಶೀಲಿಸಲಾಗಿ, ಉಲ್ಲೇಖಿತ ಪತ್ರದಲ್ಲಿನ ಸಿ.ಎಸ್. ಷಡಕ್ಷರಿ ಇವರ ಸದಸ್ಯತ್ವದ ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತ್ಯಾ ಹಾಗೂ ದತ್ತವಾದ ಅಧಿಕಾರದನ್ವಯ ಪರಿಶೀಲಿಸಿ ನಿಯಮಾನುಸಾರ ತುರ್ತಾಗಿ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಈ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ರಾಜ್ಯಾಧ್ಯಕ್ಷರ ಪ್ರತಿಕ್ರಿಯೆ

ಈ ಪತ್ರದ ಕುರಿತು ಸುದ್ದಿಲೈವ್ ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ರಾಜ್ಯ ಪತಿಷತ್ ಸದಸ್ಯ ಬಿ.ಗಂಗಾಧರರವರು ಮನವಿ ಪತ್ರ ಸಲ್ಲಿಸಿದ್ದಾರೆ. ಇವರ ಮನವಿ ಪತ್ರದ ಆಧಾರದ ಮೇರೆಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಂಘಗಳ ಜಿಲ್ಲಾ ನೋಂದಣಿ ಅಧಿಕಾರಿಗಳು ಕರ್ನಾಟಕ ರಾಜ್ಯ ನೌಕರರ ಸಂಘದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ನಿಯಮಾನುಸಾರ ಅಮಾನತ್ತಿಗೆ ಅವಕಾಶ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ-https://suddilive.in/archives/4926

Related Articles

Leave a Reply

Your email address will not be published. Required fields are marked *

Back to top button