ರಾಜಕೀಯ ಸುದ್ದಿಗಳು

ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣವನ್ನ  ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಚನ್ನಬಸಪ್ಪ ಸೇರಿದಂತೆ ನೂರಾರು ಮಹಿಳೆಯರು ಭಾಗಿಯಾಗಿ ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಲಾಗಿದೆ. ಮಹಿಳೆ ವಿವಸ್ತ್ರಗೊಳಿಸಿದ ಆರೋಪಿಗಳ ವಿರುದ್ದ ಕಠಿಣ ಶಿಕ್ಷೆ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರ ಅಧ್ಯಕ್ಷ ಜಗದೀಶ್, ಪಾಲಿಕೆ ಮಾಜಿ ಸದಸ್ಯೆ ಅನಿತಾ ರವಿಶಂಕರ್, ಮಾಜಿ ಮೇಯರ್ ಸುವರ್ಣ ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/4948

Related Articles

Leave a Reply

Your email address will not be published. Required fields are marked *

Back to top button