ಸ್ಥಳೀಯ ಸುದ್ದಿಗಳು

ಶಿವಮೊಗ್ಗವನ್ನ ಐದು ವರ್ಷಗಳಲ್ಲಿ ಸಮಗ್ರ ಅಭಿವೃದ್ಧಿ-ಸಂಸದ ಬಿ.ವೈ.ರಾಘವೇಂದ್ರ

ಸುದ್ದಿಲೈವ್/ಶಿವಮೊಗ್ಗ

ಸಂಸತ್ ಅಧಿವೇಶನದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಯೋಜನೆ ಪ್ರಸ್ತಾಪ ಮಾಡಿದ್ದೇನೆ. ರೈಲ್ವೆ, ಹೈವೇ, ಹಾಗೆಯೇ ನೀರಾವರಿ ಸೌಲಭ್ಯ ಎಲ್ಲವೂ ಕಳೆದ 5 ವರ್ಷಗಳಿಂದ ಅಭಿವೃದ್ಧಿ ಪಡಿಸಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೃತ ಕಾಲದಲ್ಲಿ ಭಾರತ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಒಂದಾಗಿರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಸಮಾಜವಾದಿ ನೆಲೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಿದ್ಧಾಂತ ಒಪ್ಪಿಕೊಂಡು ಸಂಸದನಾಗಿ ಆಯ್ಕೆ ಮಾಡಿದ್ದಾರೆ ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಂಜು ಮುಸುಕಿದ ವಾತಾವರಣ ನಿರ್ಮಾಣ ಹಿನ್ನೆಲೆಯಲ್ಲಿ ವಿಮಾನ ಹಾರಾಟ ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಮಂತ್ರಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದರು.

5 ಸಾವಿರ ಅಡಿಯಿಂದ ಕೆಳಗೆ ಕಾಣಿಸಲು ಅಗತ್ಯವಾಗಿ ಬೇಕಾಗಿದ್ದ ಉಪಕರಣಗಳು ಅಳವಡಿಸಲು ಒಪ್ಪಿಗೆ ಸೂಚಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ಇಡಲು ರಾಜ್ಯ ಸಂಪುಟದಲ್ಲಿ ಅನುಮೋದನೆ ಮಾಡಲಾಗಿತ್ತು. ಆದರೆ ಇದೀಗ ಅಧಿವೇಶನದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಿದೆ ಎಂದರು.

ಬೈಂದೂರು ನಿಂದ ರಾಣೆಬೆನ್ನೂರು ರಸ್ತೆ,

ತಾವರೆಕೊಪ್ಪದಿಂದ ಸಾಗರ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೋರಲಾಗಿದೆ ಎಂದರು.

ಇದನ್ನೂ ಓದಿ-https://suddilive.in/archives/4968

Related Articles

Leave a Reply

Your email address will not be published. Required fields are marked *

Back to top button