ಕ್ರೈಂ ನ್ಯೂಸ್

ಸಂಚಾರಿ ಪೊಲೀಸ್ ಠಾಣೆಗೆ ಸಂದೀಪ್ ನಿಯುಕ್ತಿ

ಸುದ್ದಿಲೈವ್/ಶಿವಮೊಗ್ಗ

ಸಾರ್ವಜನಿಕ ಹಿತಾಸಕ್ತಿಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೀಪರನ್ನ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಒಂದು ತಿಂಗಳ ಹಿಂದಷ್ಟೆ ಸಿಇಎನ್ ಪೊಲೀಸ್ ಠಾಣೆಯಿಂದ ಸಾರ್ವಜನಿಕ ಹಿತಾಸಕ್ತಿಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಎಸ್ಪಿ ಮಿಥುನ್ ಕುಮಾರ್ ಆದೇಶಿಸಿದ್ದರು.

ಆದರೆ, ದಿಡೀರ್ ನೆ ನಿನ್ನೆ ಸಂದೀಪ್ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಅಚ್ಚರಿ ಮೂಡಿಸಿತ್ತು. ಈ ಕುರಿತು ಸುದ್ದಿಲೈವ್ ಸಮಗ್ರ ವರದಿ ಮಾಡಿತ್ತು. ಅದರ ಬೆನ್ನಲ್ಲೇ ಎಸ್ಪಿ ಮಿಥುನ್ ಕುಮಾರ್ ಕ್ರಮ ಕೈಗೊಂಡಿದ್ದಾರೆ.

ಮಿಥುನ್ ಕುಮಾರ್ ಅವರ ಆದೇಶದ ಮೇರೆಗೆ ಸಂದೀಪ್ ರನ್ನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಬದಲಾಯಿಸಲಾಗಿದೆ. ಸಿಇಎನ್ ಠಾಣೆಯಲ್ಲಿ ನಿನ್ನೆ ಡ್ಯೂಟಿಗೆ ಹಾಜರಾಗಿದ್ದ ಸಂದೀಪ್ ಅವರನ್ನ ಪಶ್ಚಿಮ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ-https://suddilive.in/archives/5095

Related Articles

Leave a Reply

Your email address will not be published. Required fields are marked *

Back to top button