ರಾಜಕೀಯ ಸುದ್ದಿಗಳು

142 ಜನ ಸಂಸತ್ ಸದಸ್ಯರನ್ನ ಅಮಾನತ್ತುಗೊಳಿಸಿರುವುದನ್ನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸದನದ 142 ಸದಸ್ಯರನ್ನ ಅಮಾನತ್ತು ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರವನ್ನ ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಪಕ್ಷ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕಿ ಸಂಸತ್ತನ್ನು ಸ್ಮಶಾನವನ್ನಾಗಿ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಮಹಾವೀರ ವೃತ್ತದ ಬಳಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಪಕ್ಷದ ಬಾವುಟ, ಪ್ರಧಾನಿ ಮೋದಿ ಸರ್ವಾಧಿಕಾರಿ, ಪ್ರಜಾಪ್ರಭುತ್ವದ ಕಗ್ಗೊಲೆ ಎಂಬ ಪ್ಲಕಾರ್ಡ್ ಮನನ ತ್ತು ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್, ಸದಸನದಲ್ಲಿ ಆಗುಂತುಕರಿಗೆ ಪಾಸ್ ಕೊಟ್ಟ ಸಂಸದ ಪ್ರತಾಪ್ ಸಿಂಹರ ವಿರುದ್ಧ ಕ್ರಮ ತೆಗೆದುಕೊಳ್ಳದ ಬಿಜೆಪಿ 142 ಜನರನ್ನ ಅಮಾನತ್ತಿನಲ್ಲಿಟ್ಟು ಪ್ರಜಾಪ್ರಭುತ್ವವನ್ನ ಕಗ್ಗೊಲೆ ಮಾಡಿದೆ. ಪ್ರಧಾನಿ ಮೋದಿ ಸರ್ವಾಧಿಕಾರಿ ಎಂದು ಸಾಬೀತು ಪಡಿಸಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಮಾಜಿ ಎಂಎಲ್ ಸಿ ಆರ್.ಪ್ರಸನ್ನ ಕುಮಾರ್, ಇಕ್ಕೇರಿ ರಮೇಶ್, ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಶ, ವೈ.ಹೆಚ್ ನಾಗರಾಜ್ ಮೊದಲಾದವರು ಭಾಗಿಯಾಗಿದ್ದಾರೆ.

ಇದನ್ನೂ ಓದಿ-https://suddilive.in/archives/5247

Related Articles

Leave a Reply

Your email address will not be published. Required fields are marked *

Back to top button