ಸ್ಥಳೀಯ ಸುದ್ದಿಗಳು

ಶಿವಮೊಗ್ಗದಲ್ಲಿ ಮೂವರಿಗೆ ಕರೋನ ಪಾಸಿಟಿವ್

ಸುದ್ದಿಲೈವ್/ಶಿವಮೊಗ್ಗ

ರಾಜ್ಯಾದ್ಯಂತ ಕೊರೋನ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಶಿವಮೊಗ್ಗದಲ್ಲೂ ದಿಡೀರ್ ಅಂತ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ.

ಮೂವರಿಗೆ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದ್ದು ಓರ್ವರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ.

ಅನೇಕ ತಿಂಗಳ ನಂತರ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌

ಶಿವಮೊಗ್ಗದಲ್ಲಿ ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ತಿಮ್ಮಪ್ಪ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶಿವಮೊಗ್ಗದಲ್ಲಿ 3 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಒಂದು ಕೇಸ್ ಆಸ್ಪತ್ರೆಯಲ್ಲಿ ದಾಖಲಾಗಿದೆ ಎಂದರು.

ಇಬ್ಬರು ಹೋಂ ಹೈಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಮೆಗ್ಗಾನ್ ಆಸ್ಪತ್ರೆಯಲ್ಲಿ 30 ಆಕ್ಸಿಜನ್ ಬೆಡ್ ಸಿದ್ದ ಮಾಡಲಾಗಿದೆ. 12 ಐಸಿಯು ಬೆಡ್ ಸಿದ್ದ ಇದೆ. ಜನತೆ ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.

ಯಾವುದೇ ಸಿಂಟಮ್ಸ್ ಇದ್ದರೆ ಚಿಕಿತ್ಸೆ ಪಡೆದುಕೊಳ್ಳಿ, 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ-https://suddilive.in/archives/5264

Related Articles

Leave a Reply

Your email address will not be published. Required fields are marked *

Back to top button