ಸ್ಥಳೀಯ ಸುದ್ದಿಗಳು

10 ಕ್ಕೇರಿದ ಕೊರೋನ ಪಾಸಿಟಿವ್ ಸಂಖ್ಯೆ

ಸುದ್ದಿಲೈವ್/ಶಿವಮೊಗ್ಗ

ಕೊರೋನದ ಆರ್ಭಟ ಮುಂದು ವರೆದಿದೆ. ಇಂದು  ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು  ಎಂದು ಹೆಲ್ತ್ ಬುಲಿಟಿನ್ ತಿಳಿಸಿದೆ.

ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.

ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ ಏರಿದೆ.   ಸೋಂಕು ಪತ್ತೆಯಾದ 8 ಜನರಿಗೆ ಹೋಂ‌ ಐಸೋಲೇಷನ್ ಗೆ ಒಳಪಡಲು ಸೂಚಿಸಲಾಗಿದೆ. ಉಳಿದಿಬ್ಬರಿಗೆ ನಿಗದಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಂಕಿಗೆ ಯಾರೂ ಬಲಿಯಾಗಿಲ್ಲ ಎಂದು  ಇಂದು ಬಿಡುಗಡೆಯಾದ ಕೊರೋನ ಹೆಲ್ತ್ ಬುಲಿಟಿನ್ ಪ್ರಕಟಪಡಿಸಿದೆ.‌

ಇದನ್ನೂ ಓದಿ-https://suddilive.in/archives/5546

Related Articles

Leave a Reply

Your email address will not be published. Required fields are marked *

Back to top button