ಉದ್ಯೋಗ ಸುದ್ದಿಗಳು

ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ-ಯುವ ಪರಿವರ್ತಕತರು ಮತ್ತು ಸಮಾಲೋಚಕರ ಆಯ್ಕೆಗೆ ಅರ್ಜಿ ಆಹ್ವಾನ

ಸುದ್ದಿಲೈವ್/ಶಿವಮೊಗ್ಗ

ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ 24 ರಿಂದ 45 ವರ್ಷಗಳಾಗಿದ್ದು, ಆಸಕ್ತಿ ಉಳ್ಳವರು ತಮ್ಮ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಅಂಚೆ ವಿಳಾಸ: ಸುದ್ದಿ ವಿಭಾಗದ ಮುಖ್ಯಸ್ಥರು, ಆಕಾಶವಾಣಿ ನಿಲಯ, ರಾಜಭವನ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22356344 ಮೂಲಕ ಸಂಪರ್ಕಿಸಬಹುದು.

ಯುವ ಪರಿವರ್ತಕತರು ಮತ್ತು ಸಮಾಲೋಚಕರ ಆಯ್ಕೆಗೆ ಅರ್ಜಿ ಆಹ್ವಾನ

ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಗೌರವಧನವಾಗಿ ರೂ. 7,000/-ಗಳನ್ನು ನೀಡಲಾಗುವುದು.

ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಗೌರವಧನವಾಗಿ ರೂ. 9,000/-ಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, ದೂ.ಸಂ.: 08182-223328 ನ್ನು ಸಂಪರ್ಕಿಸುವುದು.

ಇದನ್ನೂ ಓದಿ-https://suddilive.in/archives/6033

Related Articles

Leave a Reply

Your email address will not be published. Required fields are marked *

Back to top button