ನಗರ‌ ಸುದ್ದಿಗಳು

ಮಾ.10 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು,

ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ.

ಇದನ್ನೂ ಓದಿ-https://suddilive.in/archives/10253

Related Articles

Leave a Reply

Your email address will not be published. Required fields are marked *

Back to top button