ಕ್ರೈಂ ನ್ಯೂಸ್

ರಸ್ತೆ ಅಪಘಾತ ಸಿಸಿ ಟಿವಿಯಲ್ಲಿ ಸೆರೆ

ಸುದ್ದಿಲೈವ್/ಶಿವಮೊಗ್ಗ

ರಸ್ತೆ ಬದಿಯಲ್ಲಿ ನಿಂತಿದ್ದ ಶಾಲಾ ಬಾಲಕಿ ಹಾಗು  ಢಿಕ್ಕಿಯೊಡೆದ ಬೈಕ್ ನ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಮೊಗ್ಗದ ಸಾಗರ ರಸ್ತೆಯ ಗಾಡಿಕೊಪ್ಪ ಬಳಿ ನಡೆದ ಘಟನೆ ಇದಾಗಿದ್ದು, ಸಾಗರ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿ, ವ್ಯಕ್ತಿಗೆ ಢಿಕ್ಕಿ ಹೊಡೆದಿದೆ.

ಬೈಕ್ ಢಿಕ್ಕಿಯೊಡೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸೇರಿದಂತೆ ಮೂರು ಮಂದಿಗೆ ಗಾಯವಾಗಿದೆ. ಮೂರು ಮಂದಿ ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಘಟನೆ ಕುರಿತು ಶಿವಮೊಗ್ಗ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ-https://suddilive.in/archives/6232

Related Articles

Leave a Reply

Your email address will not be published. Required fields are marked *

Back to top button