ಸ್ಥಳೀಯ ಸುದ್ದಿಗಳು

ಶರಾವತಿ ನೀರು ಬೆಂಗಳೂರಿಗೆ ಹರಿಸುವ ಪ್ರಸ್ತಾಪ-ಬೇಳೂರು ಗುಡುಗಿದ್ದೇಕೆ?

ಶರಾವತಿ ನದಿ ನೀರನ್ನ ಬೆಂಗಳೂರಿಗೆ ಹರಿಸುವ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. 2017-2018 ರಲ್ಲಿ ಡಿಪಿಆರ್ ಆಗಿದ್ದ ಯೋಜನೆ ಬಿಜೆಪಿ ಸರ್ಕಾರ ಬಂದ ವೇಳೆ ಬ್ರೇಕ್ ಬಿದ್ದಿತ್ತು. ಆದರೆ ಈಗ ಮತ್ತೆ ಯೋಜನೆ ತಲೆ ಎತ್ತುತ್ತಿದೆ.‌ ಈ ವಿಷಯ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಗುಡಿಗಿದ್ದಾರೆ. 

ಸುದ್ದಿಲೈವ್/ಸಾಗರ

ಶರಾವತಿ ನದಿ ನೀರನ್ನು ಪುಕ್ಕಟ್ಟೆಯಾಗಿ ಬೆಂಗಳೂರಿಗೆ ಹರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ.

ರಾಜ್ಯ ಸರ್ಕಾರ ಸಾಗರ- ಹೊಸನಗರ ಭಾಗದ ಜನರಿಗೆ ದಿನದ ೨೪ಗಂಟೆ ಶುದ್ದ ಕುಡಿಯುವ ನೀರು ಪೂರೈಕೆ ಮಾಡುತ್ತೇವೆ ಎಂದು ಅಗ್ರಿಮೆಂಟ್ ಮಾಡಿ ಕೊಡಬೇಕು. ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕಾದರೆ ರಾಜ್ಯ ಸರ್ಕಾರ ಅಗ್ರಿಮೆಂಟ್ ಮಾಡಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡಿರುವ ಸಂತ್ರಸ್ತರು ಸಾಗರ, ಹೊಸನಗರ ಭಾಗದಲ್ಲಿದ್ದಾರೆ. ಅವರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎನ್ನುವ ಪ್ರಸ್ತಾಪವಿದೆ. ಆದರೆ ಅಗ್ರಿಮೆಂಟ್ ನಂತರವೇ ಬೆಂಗಳೂರಿಗೆ ನೀರು ಎಂದು ಗುಡುಗಿದರು.

ಕುಡಿಯುವ ನೀರು ಕೊಡಲು ಆಗುವುದಿಲ್ಲ ಎಂದು ಹೇಳಲು ಬರುವುದಿಲ್ಲ. ನಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸಿದರೆ ನೀರು ಹರಿಸುವ ಬಗ್ಗೆ ಯೋಚಿಸಲಾಗುತ್ತದೆ. ಶರಾವತಿ ನದಿನೀರು ವಿದ್ಯುತ್ ಯೋಜನೆಗೆ ಮಾತ್ರ ಉಪಯೋಗಿಸಿಕೊಳ್ಳಲಾಗುತ್ತಿದ್ದು, ಕೃಷಿ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿಲ್ಲ

ನಮ್ಮ ಭಾಗದಲ್ಲಿ ಕುಡಿಯುವ ನೀರಿಗೆ ಶರಾವತಿ ವರಧಾತೆಯಾಗಿದ್ದಾಳೆ. ಏಕಾಏಕಿ ನದಿನೀರು ಒಯ್ಯುತ್ತೇವೆ ಎಂದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಶಾಸಕರು  ಪ್ರತಿಕ್ರಿಯಿಸಿದ್ದಾರೆ.‌

ಇದನ್ನೂ ಓದಿ-https://suddilive.in/archives/6766

Related Articles

Leave a Reply

Your email address will not be published. Required fields are marked *

Back to top button