ರಾಜಕೀಯ ಸುದ್ದಿಗಳು

ಪೊಲೀಸರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದಾರೆ-ಸಂಸದ ರಾಘವೇಂದ್ರ ಗಂಭೀರ ಆರೋಪ

ಸುದ್ದಿಲೈವ್/ಶಿವಮೊಗ್ಗ

ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಳೆದ ಒಂದು ವಾರದ ಹಿಂದೆ ನಡೆದ ಹಲ್ಲೆ ವಿಚಾರದಲ್ಲಿ ರಾಜಕೀಯ ಪರ ವಿರೋಧಗಳು ಇಂದಿಗೂ ಮುಂದು ವರೆದಿದೆ. ಇಂದು ಸಂಸದ ಬಿ.ವೈ.ರಾಘವೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿಯಾಗಿ ಹಲ್ಲೆಗೊಳಗಾದ ಗೋಕುಲ್ ಕೃಷ್ಣನ್ ರವರ ಆರೋಗ್ಯ ವಿಚಾರಿಸಿದ್ದಾರೆ.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು ಕಳೆದ ಭಾನುವಾರ ರಾತ್ರಿ ಘಟನೆ ನಡೆದಿದೆ. ಬಿಜೆಪಿ ‌ಕಾರ್ಯಕರ್ತ ಗೋಕುಲ್ ಕೃಷ್ಣನ್ ಹಲ್ಲೆಗೊಳಗಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ನವರು, ಶಾಸಕರ ಕಡೆಯವರು ಹಲ್ಲೆ ಮಾಡಿರುವುದಾಗಿ ಆರೋಪಿಸಿದರು.

ಹಲ್ಲೆಗೆ ಮೊದಲು ಕಾರು ಜಖಂ ಮಾಡಿದ್ದರು. ಗೋಕುಲ್ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳನ್ನು ಇನ್ನೂ ಬಂಧಿಸಿಲ್ಲ. ಪೊಲೀಸರು ಸಹ ಕಾಂಗ್ರೆಸ್ ಕಾರ್ಯಕರ್ತರ ರೀತಿ ನಡೆದುಕೊಳ್ಳುತ್ತಿದ್ದಾರೆ. ಭದ್ರಾವತಿಗೆ ಕಳಂಕ ತರುವಂತಹ ಕೆಲಸವನ್ನು ‌ಕಿಡಿಗೇಡಿಗಳು ಮಾಡ್ತಿದ್ದಾರೆ. ಮಟ್ಕಾ, ಜೂಜು ಇಸ್ಪೀಟು ದಂಧೆ ನಡೆಯುತ್ತಿದೆ ಎಂದರು.

ಹಲ್ಲೆಗೊಳಗಾದ ಗೋಕುಲ್ ಕೃಷ್ಣನ್ ವಿರುದ್ದ ಅಟ್ರಾಸಿಟಿ ಕೇಸ್ ಹಾಕಿಸಿದ್ದಾರೆ. ಅಧಿಕಾರ ಶಾಶ್ವತ ಅಲ್ಲ, ಈ ರೀತಿ ಗೂಂಡಾಗಿರಿ ಮಾಡೋದು ಸರಿಯಲ್ಲ. ರಾಜಕಾರಣ ಮಾಡಲು ಕಾರ್ಯಕರ್ತರಿದ್ದಾರೆ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು. ಹಾಕಿಕೊಂಡಿರುವ ಯೂನಿಫಾರ್ಮ್ ಗೆ ಮರ್ಯಾದೆ ಕೊಟ್ಟು ಕೆಲಸ ಮಾಡಬೇಕು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡುವ ಒಳ್ಳೆಯ ಕೆಲಸದ ಮೇಲೆ ಹಣೆಬರಹ ಬರೆಯಲಾಗುತ್ತದೆ. ಗೂಂಡಾಗಿರಿ ನಡೆಯುವುದಿಲ್ಲ. ಇಡಿ ಜಿಲ್ಲೆಯಲ್ಲಿ ‌ಭದ್ರಾವತಿಯಲ್ಲಿ ಜೂಜು ಮಟ್ಕಾ ಇಸ್ಪೀಟು ಜೋರಾಗಿ ನಡೆಯುತ್ತಿದೆ. ಕೆಲವು ಪೊಲೀಸರು ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಕೆಲವು ಅಧಿಕಾರಿಗಳು ಇಂತಹ ಕೃತ್ಯಕ್ಕೆ ಷಡ್ಯಂತ್ರ ಮಾಡ್ತಿದ್ದಾರೆ. ಶಿವಮೊಗ್ಗದಲ್ಲಿ ಇಂತಹ ಕೆಟ್ಟ ರಾಜಕಾರಣ ಯಾವಾಗಲೂ ನಡೆದಿಲ್ಲ ಎಂದರು.

ಸಂಸತ್ತಿನಲ್ಲಿ ಆಗಿದ್ದು ಅತ್ಯಂತ ಗಂಭೀರ ವಿಚಾರ

ಸಂಸತ್ ನಲ್ಲಿ ನಡೆದ ಸ್ಮೋಕ್ ಬಾಂಬ್ ದಾಳಿ ಕುರಿತು ಪ್ರತಿಕ್ರಿಯಿಸಿದ ಸಂಸದರು,3-4 ವ್ಯಕ್ತಿಗಳು ಎರಡು‌ ಮೂರು ತಿಂಗಳಿನಿಂದ ಮಾಕ್ ಟ್ರಯಲ್ ಮಾಡಿದ್ದಾರೆ. ವಿದ್ಯಾವಂತರಿದ್ದಾರೆ ಈ ರೀತಿ ಕೆಟ್ಟ ಕೆಲಸ ಮಾಡಲು ಏನು ಕಾರಣ? ತನಿಖೆ ಮುಖಾಂತರ ಸತ್ಯಾಂಶ ಹೊರಗೆ ಬರಲಿದೆ. ನಾನೇ ಆದರೂ ಕರ್ನಾಟಕದವರು ಅಂದ್ರೆ ದೆಹಲಿಯಲ್ಲಿ ಹೆಚ್ಚು ಪ್ರೀತಿ. ಈಗಾಗಿ ಸಹಜವಾಗಿ ಮೈಸೂರಿನವರು ಅಂತಾ ಪಾಸ್ ಕೊಟ್ಟಿದ್ದಾರೆ ಎಂದು ಸಮ್ಜಾಯಿಷಿ ನೀಡಿದರು.

ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ಮೋದಿ ಅವರನ್ನು ಶನಿ ಅಂದ್ರು, ಹಿಂದುಳಿದ ವರ್ಗದ ನಾಯಕನಿಗೆ ಥರ್ಡ್ ಕ್ಲಾಸ್ ಪದ ಉಪಯೋಗಿಸಿದ್ದಾರೆ. ಸುಳ್ಳು ಆರೋಪ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.

ಇದನ್ನೂ ಓದಿ-https://suddilive.in/archives/4936

Related Articles

Leave a Reply

Your email address will not be published. Required fields are marked *

Back to top button