ರಾಷ್ಟ್ರೀಯ ಸುದ್ದಿಗಳು

ಶಾಸಕರಾದ ಬೇಳೂರು, ಸಂಗಮೇಶ್ವರ್ ಗೆ ನಿಗಮ ಮಂಡಳಿ ಸ್ಥಾನ

ಸುದ್ದಿಲೈವ್

ಅಪಸ್ವರಗಳು ಕೇಳಿಬರುತ್ತಿದ್ದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೆಸರುಗಳನ್ನ ಆಯ್ಕೆ ಮಾಡಿ ಪಟ್ಟಿ ರಿಲೀಸ್ ಮಾಡಿದೆ. ಈ ಮೂಲಕ ಪಕ್ಷದೊಳಗೆ ನಡೆಯುತ್ತಿದ್ದ ಅಪಸ್ವರದ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದೆ. ಇನ್ನೂ ಪಟ್ಟಿ ವಿಚಾರಕ್ಕೆ ಬರುವುದಾದರೆ, ಒಟ್ಟಾರೆ 32 ಜನರ ಪಟ್ಟಿ ರಿಲೀಸ್ ಆಗಿದೆ. ಈ ಪೈಕಿ ಶಿವಮೊಗ್ಗದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಇನ್ನೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಶಿವಮೊಗ್ಗ ಜಿಲ್ಲೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರನ್ನ ನೇಮಿಸಲಾಗಿದೆ. ಸದ್ಯ ಕಾಂಗ್ರೆಸ್ ಪಕ್ಷದ ಮಾಹಿತಿಯಂತೆ. 32 ಜನ ಶಾಸಕರಿಗೆ ಇದೀಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಹಿಂದೆ ಹೇಳಿದಾಗೆ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಪಟ್ಟಿ ಇನ್ನಷ್ಟೆ ರಿಲೀಸ್ ಆಗಬೇಕಿದೆ.

ಇದನ್ನೂ ಓದಿ-https://suddilive.in/archives/7773

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): Failed to send buffer of zlib output compression (0) in /home/twzwscfi/suddilive.in/wp-includes/functions.php on line 5373