ಉದ್ಯೋಗ ಸುದ್ದಿಗಳು

ಜ.30 ರಂದು ಉದ್ಯೋಗ ಮೇಳ

ಸುದ್ದಿಲೈವ್/ಶಿವಮೊಗ್ಗ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/ 9482023412 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/7948

Related Articles

Leave a Reply

Your email address will not be published. Required fields are marked *

Back to top button